Homeಕರ್ನಾಟಕಗೃಹಲಕ್ಷ್ಮಿ | ಅದಾಲತ್ ಮೂಲಕ ಬಾಕಿ ಉಳಿದ ಫಲಾನುಭವಿಗಳಿಗೆ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ | ಅದಾಲತ್ ಮೂಲಕ ಬಾಕಿ ಉಳಿದ ಫಲಾನುಭವಿಗಳಿಗೆ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, “ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಓ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು” ಎಂದರು.

“ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments