Homeಕರ್ನಾಟಕವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಜಿ ಎಸ್ ಪಾಟೀಲ್, ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ನಾಮಪತ್ರ...

ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಜಿ ಎಸ್ ಪಾಟೀಲ್, ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆ

ವಿಧಾನಸಭೆ ಸಭಾಧ್ಯಕ್ಷರ ಸ್ಥಾನಕ್ಕೆ ಜಿ ಎಸ್ ಪಾಟೀಲ್ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನದ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ವಿಧಾನಸಭೆ ಸಭಾಧ್ಯಕ್ಷರ ಸ್ಥಾನಕ್ಕೆ ಜಿ ಎಸ್ ಪಾಟೀಲ್ ಅವರ ನಾಮಪತ್ರವನ್ನು ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಯಲ್ಲಿ ಸಲ್ಲಿಸಲಾಯಿತು. ಹಾಗೆಯೇ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಾಳೆ ನಡೆಯಲಿರುವ ಚುನಾವಣೆಗೆ ಸಲೀಂ ಅಹ್ಮದ್ ನಾಮಪತ್ರವನ್ನು ವಿಧಾನ ಪರಿಷತ್ ಕಾರ್ಯದರ್ಶಿ ಅವರ ಕಚೇರಿಯಲ್ಲಿ ಸಲ್ಲಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನದ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಅವರು ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಜೊತೆಯಿದ್ದು ಶುಭ ಹಾರೈಸಿದೆ. “ಚಿಂತಕರ ಚಾವಡಿ”ಯಲ್ಲಿ ಸದನದ ಘನತೆ-ಗೌರವವನ್ನು ಎತ್ತಿಹಿಡಿಯುವಲ್ಲಿ ಅವರ ಅನುಭವ ಮತ್ತು ಬದ್ಧತೆ ಮಹತ್ವದ ಪಾತ್ರ ವಹಿಸಲಿ ಎಂದು ಆಶಿಸುತ್ತೇನೆ ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments