Homeಕರ್ನಾಟಕಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಜನತೆಯ ಹಕ್ಕು: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಜನತೆಯ ಹಕ್ಕು: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

“ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು. ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿಯ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ” ಎಂದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನರೇಂದ್ರ ಮೋದಿ, ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು. ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಹೊಸ ಸುಳ್ಳು ಹಬ್ಬಿಸಿದರು. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ” ಎಂದು ಹೇಳಿದರು.

“ಬಿಜೆಪಿ ಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವೀ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ” ಎಂದು ಟೀಕಿಸಿದರು.

ನಾವು ನುಡಿದಂತೆ ನಡೆದಿದ್ದೇವೆ

“ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾನು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ” ಎಂದು ಪ್ರಶ್ನಿಸಿ ಎಂದರು.

ಚಾಮರಾಜನಗರ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವರಾದ ಶಾಸಕ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಜಾರಿ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್ , ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments