Homeಕರ್ನಾಟಕಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು, ರೌಡಿಶೀಟರ್ ಭೀಮನಗೌಡ ಹತ್ಯೆ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು, ರೌಡಿಶೀಟರ್ ಭೀಮನಗೌಡ ಹತ್ಯೆ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಭಯದ ವಾತಾವರಣ ಮೂಡಿಸಿದೆ. ರೌಡಿಶೀಟರ್ ಭೀಮನಗೌಡ ಬಿರಾದಾರ್ ಮೇಲೆ 3-4 ಮುಸುಕುದಾರಿಗಳು ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ. ಈ ಘಟನೆಯು ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.

ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಬಂಟನಾಗಿರುವ ಭೀಮನಗೌಡ ಬಿರಾದಾರ್ ಮೇಲೆ 3 ಸುತ್ತಿನ ಗುಂಡಿನ ದಾಳಿ ಮಾಡಲಾಗಿದೆ. ಇದರಿಂದ ಭೀಮನಗೌಡನ ತಲೆ ಹಾಗೂ ಎದೆಗೆ ಗುಂಡುಗಳು ತಗುಲಿದ್ದು, ಕೊನೆಯುಸಿರೆಳೆದಿದ್ದಾನೆ.

ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್​​​​ನಲ್ಲಿ ರೌಡಿಶೀಟರ್ ಭೀಮನಗೌಡ ಕಟಿಂಗ್ ಮಾಡಿಸುತ್ತಿದ್ದನು. ಈ ವೇಳೆ ಮೂರು-ನಾಲ್ಕು ಜನ, ಗುರುತು ಸಿಗದಂತೆ ಕಾಣಲು ಮುಸುಕು ಹಾಕಿಕೊಂಡು ಎಂಟ್ರಿಕೊಟ್ಟಿದ್ದಾರೆ. ಕಟಿಂಗ್ ಮಾಡುವವನ ಕಣ್ಣಿಗೆ ಖಾರದ ಪುಡಿ ಎರಚಿ ಕೂಡಲೇ ಭೀಮನಗೌಡ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಭೀಮನಗೌಡ ಗಂಭೀರವಾಗಿ ಗಾಯಗೊಂಡಿದ್ದಾನೆ.

ದಾಳಿ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಗುಂಡಿನ ದಾಳಿ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ಧಂತೆ ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments