Homeಕರ್ನಾಟಕರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡ ಚರ್ಚೆ

ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡ ಚರ್ಚೆ

ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು.

ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ ಗೇಜ್‌ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರಲ್ಲದೆ, ಆಗಿನ ತಮ್ಮ ರೇಲು ಪ್ರಯಾಣದ ಅನುಭವವನ್ನು ನೆನೆದರು.

ಅದೇ ರೇಲು ಮಾರ್ಗ ಮುಂಬಯಿ- ಚೆನ್ನೈ ರೇಲು ಮಾರ್ಗವಾಗಿದ್ದು, ಅದಕ್ಕೆ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಸಂಪರ್ಕ ಕಲ್ಪಿಸಬೇಕು. ಇದು ಬಹಳ ಉಪಯುಕ್ತವಾಗಿದ್ದು, ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ನಾನು ರೇಲ್ವೆ ಸಚಿವರನ್ನು ಅಭಿನಂದಿಸಿದರೆ ಕೆಲವರು ತಪ್ಪು ತಿಳಿದುಕೊಳ್ಳಬಾರದು. ನಾನು ಪ್ರಧಾನಿ ಆಗಿದ್ದಾಗ ಈ ಕ್ಷೇತ್ರದಲ್ಲಿ ಏನು ಮಾಡಿದ್ದೇನೆ, ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ರೇಲ್ವೆ ತಿದ್ದುಪಡಿ ಮಸೂದೆಯು ಅತ್ಯಂತ ಮಹತ್ವದ ಮಸೂದೆ. ಇದಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದ ಮಾಜಿ ಪ್ರಧಾನಿಗಳು; ಸದನದಲ್ಲಿಯೇ ಉಪಸ್ಥಿತರಿದ್ದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ನೀವು ಅತ್ಯಂತ ಪ್ರಾಮಾಣಿಕ ರೇಲ್ವೆ ಸಚಿವರು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments