ಕರ್ನಾಟಕದ ಹಿರಿಯ ರಾಜಕಾರಣಿ, ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ. ಆದ್ರೆ, ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣೆಗೆ ಸ್ಪರ್ಧಿಸಿದಾಗ ಜನರೇ ಹಣ ನೀಡಿ ಆಶೀರ್ವದಿಸಿದ್ದರು ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ” ಎಂದರು.
“ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು 50 ಕೋಟಿ ರೂಪಾಯಿ ಹಣ ಬೇಕು. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ನನಗಿಲ್ಲ. ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂದು ತಿಳಿಸಿದರು.


