Homeಕರ್ನಾಟಕಜೆಡಿಎಸ್‌ನಿಂದ ಸಿಎಂ ಇಬ್ರಾಹಿಂರನ್ನು ಅಮಾನತು ಮಾಡಿ ಹೆಚ್‌ ಡಿ ದೇವೇಗೌಡ ಆದೇಶ

ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂರನ್ನು ಅಮಾನತು ಮಾಡಿ ಹೆಚ್‌ ಡಿ ದೇವೇಗೌಡ ಆದೇಶ

ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ಬೆನ್ನಲ್ಲೇ ಈಗ ​ಪಕ್ಷದಿಂದಲೇ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ​​ಡಿ ದೇವೇಗೌಡ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ. ಸದಸ್ಯತ್ವ ನೋಂದಣಿ ಅಭಿಯಾನ ಮಾಡಿಲ್ಲ. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ.

ಜೆಡಿಎಸ್ ಕರ್ನಾಟಕ ಘಟಕದ ಹಿಂದಿನ ಮಹಾ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಶಾಸಕ ಎಸ್ ಎಲ್ ಬೋಜೇಗೌಡ ಸಲ್ಲಿಸಿರುವ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್‌ನ ಪ್ರಸ್ತುತ ಕಾರ್ಯಕಾರಿ ಸಮಿತಿ, ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments