Homeಕರ್ನಾಟಕಎಫ್‌ಐಆರ್‌ ರದ್ದುಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಚ್‌ಡಿಕೆ, ನಿಖಿಲ್‌, ಸುರೇಶ್‌ ಬಾಬು

ಎಫ್‌ಐಆರ್‌ ರದ್ದುಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಚ್‌ಡಿಕೆ, ನಿಖಿಲ್‌, ಸುರೇಶ್‌ ಬಾಬು

‌ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮತ್ತು ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ್‌ ದೂರು ಆಧರಿಸಿ ಬೆಂಗಳೂರಿನ ಸಂಜಯ್‌ನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬುಧವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಮಾಧ್ಯಮಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪುತ್ರ ಹಾಗೂ ಹಾಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್‌ ಬಾಬು ವಿರುದ್ಧ ದೂರು ನೀಡಿದ್ದರು.

ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ಆಧರಿಸಿ ಬೆಂಗಳೂರಿನ ಸಂಜಯ್‌ ನಗರ ಠಾಣಾಧಿಕಾರಿಯು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ನಿಖಿಲ್‌ ಮತ್ತು ಸುರೇಶ್‌ ಬಾಬು ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 224 (ಸರ್ಕಾರಿ ಅಧಿಕಾರಿಗೆ ಬೆದರಿಕೆ) ಅಡಿ ಪ್ರಕರಣ ದಾಖಲಿಸಿದ್ದರು.

ಈಗ ಈ ಮೂವರು ನಾಯಕರು ಎಫ್‌ಐಆರ್‌ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಿದೆ.

“ತಮ್ಮ ರಾಜಕೀಯ ಎದುರಾಳಿಗಳ ಪ್ರಚೋದನೆಗೆ ಒಳಗಾಗಿ ದೂರುದಾರ ಎಂ ಚಂದ್ರಶೇಖರ್‌ ಅವರು ತಮ್ಮ ವಿರುದ್ಧ ಆರೋಪ ಮಾಡಿ, ಘನತೆಗೆ ಹಾನಿ ಮಾಡಿದ್ದಾರೆ. ಕುಮಾರಸ್ವಾಮಿ ಅವರ ವಿರುದ್ಧ ಚಂದ್ರಶೇಖರ್‌ ಅವರು ದಾಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಾರದಿತ್ತು. ಅರ್ಜಿದಾರರನ್ನು ಅವಮಾನಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಹಲವು ರಾಜಕೀಯ ವಿರೋಧಿಗಳು ಚಂದ್ರಶೇಖರ್‌ ಅವರನ್ನು ಪ್ರಚೋದಿಸಿದ್ದು, ಅವರು ಬರೆದಿರುವ ಪತ್ರವನ್ನು ಪೊಲೀಸ್‌ ಇಲಾಖೆಯಲ್ಲಿ ಹಂಚಿಕೆ ಮಾಡಲಾಗಿದೆ. ಈಗ ದೂರಿನಲ್ಲಿ ಮಾಡಿರುವ ಆರೋಪಗಳು ಸೃಷ್ಟಿತವಾಗಿದ್ದು, ಎಫ್‌ಐಆರ್‌ ದಾಖಲಿಸುವ ಉದ್ದೇಶದಿಂದ ಮಾಡಲಾಗಿದೆ. ಹೀಗಾಗಿ, ಅದನ್ನು ವಜಾ ಮಾಡಬೇಕು” ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments