Homeಕರ್ನಾಟಕಎಚ್‌ಡಿಕೆ, ನಿಖಿಲ, ಸುರೇಶ್‌ ಬಾಬು ವಿರುದ್ಧ ಎಡಿಜಿಪಿ ಎಂ.ಚಂದ್ರಶೇಖರ್ ದೂರು

ಎಚ್‌ಡಿಕೆ, ನಿಖಿಲ, ಸುರೇಶ್‌ ಬಾಬು ವಿರುದ್ಧ ಎಡಿಜಿಪಿ ಎಂ.ಚಂದ್ರಶೇಖರ್ ದೂರು

ತಮ್ಮ ಹಾಗೂ ಕುಟುಂಬದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಬೆಂಗಳೂರಿನ ಸಂಜಯ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಕುಮಾರಸ್ವಾಮಿ ಅವರು ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ. ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ, ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ ನಿಖಿಲ್ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ, ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ಅವರೂ ನನ್ನ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿದ್ದಾರೆ. ಚಂದ್ರಶೇಖರ್ ಅವರ ದೂರನ್ನು ಸ್ವೀಕರಿಸಿರುವ ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments