Homeಕರ್ನಾಟಕಪ್ರಕಟಣಾಪೂರ್ವ ಮತದಾರರ ಕರಡು ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕಿದ್ದು ಹೇಗೆ: ಈಶ್ವರ ಖಂಡ್ರೆ ಪ್ರಶ್ನೆ

ಪ್ರಕಟಣಾಪೂರ್ವ ಮತದಾರರ ಕರಡು ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕಿದ್ದು ಹೇಗೆ: ಈಶ್ವರ ಖಂಡ್ರೆ ಪ್ರಶ್ನೆ

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ, ನಮೂನೆ 7 ಸಲ್ಲಿಕೆ ಮೂಲಕ ಅರ್ಹ ಮತದಾರರ ಸಂವಿಧಾನದತ್ತ ಹಕ್ಕು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿಗೆ ಹೋಗುವ ಮಾರ್ಗದಲ್ಲಿ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕಾರ್ಯಕರ್ತರು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ವಮುದ್ರಿತ 250, 300 ನಮೂನೆ 7 ಸಲ್ಲಿಸಿ ಕಾಂಗ್ರೆಸ್ ಒಲವಿರುವ ಮತದಾರರನ್ನು ಪಟ್ಟಿಯಿಂದ ತೆಗೆಸಿಹಾಕುವ ಕಾರ್ಯ ಮಾಡುತ್ತಿದ್ದಾರೆ. ಇದು ಘೋರ ಅಪರಾಧ ಎಂದರು.

ಪ್ರಕಟಣಾಪೂರ್ವ ಕರಡು ಸಿಕ್ಕಿದ್ದು ಹೇಗೆ?

ಎಸ್.ಐ.ಆರ್. ಪ್ರಕ್ರಿಯೆ ನಡೆಸುತ್ತಿರುವ ಚುನಾವಣಾ ಆಯೋಗ ಇನ್ನೂ ಕರಡು ಮತದಾರರ ಪಟ್ಟಿ ಪ್ರಕಟಿಸಿಲ್ಲ. ಪ್ರಕಟಣಾಪೂರ್ವ ಕರಡು ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕಿದ್ದಾದರೂ ಹೇಗೆ. ಇದರ ಹಿಂದೆ ಬಿಜೆಪಿಯ ವ್ಯವಸ್ಥಿತ ಮತ್ತು ಸಂಘಟಿತ ಸಂಚಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಈ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು. ಅರ್ಹ ಮತದಾರರು ನಿವಾಸದಲ್ಲಿ ಇಲ್ಲವೆಂದು, ಇಲ್ಲವೇ ಮೃತಪಟ್ಟಿದ್ದಾರೆಂದು ಪ್ರಮಾಣೀಕರಿಸಿ ನಮೂನೆ 7 ಸಲ್ಲಿಸಿದ್ದಾರೆ. ಇದು ಅಪರಾಧವಲ್ಲವೇ. ಇವರಿಗೆ ಈ ದತ್ತಾಂಶ ಸಿಕ್ಕಿದ್ದಾದರೂ ಹೇಗೆ ಎಂದು ಪ್ರಶ್ನಿಸಿದರು.

ಜಾನುವಾರು ಮೇವಿಗೆ 25 ಕೋಟಿ ರೂ:

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮೇವು ಬೆಳೆಸಲು ಸರ್ಕಾರ 25 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ 117 ಕೋಟಿ ರೂ. ಮುಂಗಡವಾಗಿ ನೀಡಿದ್ದರು. ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 189 ಕೋಟಿ ರೂ. ಗಳನ್ನು ಪ್ರತಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ನೀಡಿದ್ದು, ಒಟ್ಟು 306 ಕೋಟಿ ರೂ. ಲಭ್ಯವಿದೆ. ಹೀಗಾಗಿ ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ ಎಂದರು.

ಕೆಪಿಎಸ್ಸಿಯಲ್ಲಿ ಪಾರದರ್ಶಕವಾಗಿ ನೇಮಕಾತಿ ಆಗಬೇಕು

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುವ ನೇಮಕಾತಿಗಳು ಪಾರದರ್ಶಕವಾಗಿರಬೇಕು. ಅರ್ಹ ಮತ್ತು ಪ್ರತಿಭಾವಂತ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಬೇಕು. ಸರ್ಕಾರ ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುತ್ತದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments