Homeಕರ್ನಾಟಕʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ನಿಂದ ಸಂಚಾರ

ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ನಿಂದ ಸಂಚಾರ

ʼಹುಬ್ಬಳ್ಳಿ-ಜೋಧಪುರ್‌ʼ ವಿಶೇಷ ರೈಲು ಸೆಪ್ಟೆಂಬರ್‌ನಿಂದ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಜೋಧಪುರ್‌ ನೂತನ ರೈಲು (ಸಂಖ್ಯೆ: 07359) ಹುಬ್ಬಳ್ಳಿಯಿಂದ 7:30ಕ್ಕೆ ತೆರಳಿ BGKT (ಭಗತ ಕಿ ಕೋಟಿ)ಗೆ ಬೆಳಗ್ಗೆ 5:30ಕ್ಕೆ ತಲುಪಲಿದೆ. ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದೆ. ಸೆಪ್ಟೆಂಬರ್‌ 28ರಿಂದ ಸಂಚಾರ ಆರಂಭಿಸಲಿದೆ.

ನೂತನವಾಗಿ ಸಂಚಾರ ಆರಂಭವಾಗುವ ಹುಬ್ಬಳ್ಳಿ-ಜೋಧಪುರ್‌ ರೈಲ್ವೆ ಸಂಚಾರಕ್ಕೆ ಪ್ರಯಾಣಿಕರಿಂದ ಆಗಲೇ ಟಿಕೆಟ್‌ ಬುಕಿಂಗ್‌ ಸಹ ಶುರುವಾಗಿದೆ. ರೈಲ್ವೆ ಇಲಾಖೆ ಸೆಪ್ಟೆಂಬರ್‌ 28, ಅಕ್ಟೋಬರ್‌ 5, ಅಕ್ಟೋಬರ್‌ 12, ಅಕ್ಟೋಬರ್‌ 1̧9 ಅಕ್ಟೋಬರ್‌ 2ರಂದು ಪ್ರಯಾಣಕ್ಕೆ ಮುಂಗಡ ಟಿಕೆಟ್‌ ಬುಕಿಂಗ್‌ ಆರಂಭಿಸಿದೆ.

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕ ಭಾಗದವರಿಂದ ಅನೇಕ ದಿನಗಳಿಂದಲೂ ಬಹು ಬೇಡಿಕೆಯಿತ್ತು. ಈಗ ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸಿದೆ. ತಮ್ಮ ಮನವಿ, ಒತ್ತಾಸೆಗೆ ಸ್ಪಂದಿಸಿ ಉತ್ತರ ಕರ್ನಾಟಕ ಭಾಗದ ಅದರಲ್ಲೂ ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ಯೋಜನೆ-ಸೌಲಭ್ಯಗಳಿಗೆ ವಿಶೇಷ ಆಸಕ್ತಿ ತೋರಿ ಅನುಮೋದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments