Homeಕರ್ನಾಟಕಜೀವನಾಂಶ ಕೇಳಿದ ಪತ್ನಿಯನ್ನೇ ಕೊಲೆ ಮಾಡಿದ ಪತಿ, ನಾಲ್ವರು ಆರೋಪಿಗಳ ಬಂಧನ

ಜೀವನಾಂಶ ಕೇಳಿದ ಪತ್ನಿಯನ್ನೇ ಕೊಲೆ ಮಾಡಿದ ಪತಿ, ನಾಲ್ವರು ಆರೋಪಿಗಳ ಬಂಧನ

ಹೆಂಡತಿಯ ಕೊಲೆಗೆ ಸುಪಾರಿ ನೀಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಹೋದ ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ ಮಹಿಳೆ ಲಲಿತಾ (43) ಎಂಬವರ ಕೊಲೆಗೆ ಅದೇ ತಾಲೂಕಿನ ನರೇಂದ್ರ ಗ್ರಾಮದ ಆಕೆಯ ಪತಿ ಉದಯ ದ್ಯಾಮಪ್ಪ ಹಾತರಗಿ ಸುಪಾರಿ ನೀಡಿದ್ದರು. ಉದಯ ಸುಪಾರಿ ನೀಡಿದ್ದ ಆತನ ಗೆಳೆಯ ನಾಗಪ್ಪ ಪಡೇಕಲ್‌, ಅಭಿಷೇಕ್ ವರಗಣ್ಣವರ್, ನಾಗರಾಜ ಉಪ್ಪಿನ್ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಥಾರ್ ಕಾರು ಹಾಯಿಸಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬಸ್ ಡ್ಯಾಶ್​ ಬೋರ್ಡ್​ನಲ್ಲಿನ ಸಿಸಿ ಕ್ಯಾಮೆರಾ ಪರಿಶೀಲಿಸಿದ್ದಾರೆ. ಬಳಿಕ ತನಿಖೆ ಆರಂಭಿಸಿ ನಾಲ್ವರನ್ನು ಹೆಡೆಮುರಿ ಕಟ್ಟಿದ್ದಾರೆ.

ಫೆ.26ರಂದು ಸವದತ್ತಿ ರಸ್ತೆಯ ದುರ್ಗಾದೇವಿ ದೇವಸ್ಥಾನದ ಬಳಿ ಅಪಘಾತ ನಡೆದಿತ್ತು. ಅದರಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಅಂದು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಬಳಿಕ ಡಿಕ್ಕಿ ಹೊಡೆದ ವಾಹನದ ಹಿಂದಿದ್ದ ಬಸ್ ಡ್ಯಾಶ್ ಬೋರ್ಡ್‌ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾ ಪರಿಶೀಲಿಸಿದ್ದಾರೆ. ಆಗ ಪತಿಯೇ ಪತ್ನಿಯ ಹತ್ಯೆಗೆ ಸುಪಾರಿ ನೀಡಿರುವ ಮಾಹಿತಿ ಬಹಿರಂಗಗೊಂಡಿದೆ.

ಕೊಲೆ ನಡೆದಿದ್ದು ಹೇಗೆ? ಇಬ್ಬರ ಮಧ್ಯೆ ಸಂಬಂಧ ಹಳಸಿತ್ತು. ಉದಯ್ ಫೋನ್ ಕಾಲ್ ಮಾಡುತ್ತಲೇ ಇದ್ದನಂತೆ. ಒಂದು ದಿನ ಕರೆ​ ಮಾಡಿ ಅಮ್ಮಿನಬಾವಿ ಗ್ರಾಮದ ಬಳಿ ಬಾ ಮಾತನಾಡುವುದಿದೆ ಎಂದು ಹೇಳಿದ್ದಾನೆ. ಪತಿ ಹೇಳಿದ್ದ ಸ್ಥಳಕ್ಕೆ ಆಗಮಿಸಿದ ಲಲಿತಾ ಅವರನ್ನು ಕೊಲೆ ಮಾಡಲು ಸುಪಾರಿ ಪಡೆದುಕೊಂಡಿದ್ದ ಆರೋಪಿಗಳು ಕಾಯುತ್ತಾ ಕುಳಿತಿದ್ದರು. ಪತಿ ಫೋನ್ ಮಾಡಿ ಮುಂದೆ ಬಾ ಮುಂದೆ ಬಾ ಹೇಳಿದಾಗ ಆಕೆ ಬಂದಿದ್ದಾರೆ. ಆಗ ಮಹೇಂದ್ರ ಥಾರ್ ವಾಹನ ಡಿಕ್ಕಿ ಹೊಡೆಸಿ ಲಲಿತಾರನ್ನು ಕೊಲೆ ಮಾಡಿದ್ದರು. ಆಕೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಡಿಕ್ಕಿ ಹೊಡೆಸಿ ಕೊಲೆ ಮಾಡಲಾಗಿತ್ತು. ಇದು ಹಿಂದೆ ಬರುತ್ತಿದ್ದ ಬಸ್‌ಗೆ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಕ್ಕಿ ನೋಡಿದ್ದ ಬಸ್ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನುಮಾನದ ಹಿನ್ನೆಲೆಯಲ್ಲಿ ಪ್ರಕರಣದ ಬೆನ್ನು ಬಿದ್ದ ಪೊಲೀಸರು ಇದೀಗ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಕೊಲೆಗೆ ಬಳಸಿದ್ದ ಥಾರ್ ವಾಹನವನ್ನೂ ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments