ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ಹೊರಡಿಸಿದ್ದ ರಾಜ್ಯ ಸರ್ಕಾರ ಆ ಆದೇಶೌನ್ನು ವಾಪಸ್ ಪಡೆದು, ಹೊಸ ತಿದ್ದುಪಡಿ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸರ್ಕಾರ, ತಿದ್ದುಪಡಿ ಆದೇಶ ಹೊರಡಿಸಿದೆ.
ತಿದ್ದುಪಡಿ ಆದೇಶದಲ್ಲೇನಿದೆ
“ಎಲ್ಲ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂದು ತಿದ್ದಿ ಓದಿಕೊಳ್ಳತಕ್ಕದ್ದು” ಎಂದು ತಿದ್ದುಪಡಿ ಆದೇಶದಲ್ಲಿ ತಿಳಿಸಲಾಗಿದೆ.