Homeಕರ್ನಾಟಕನರೇಂದ್ರ ಮೋದಿ ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ: ಹೆಚ್‌ ಡಿ ದೇವೇಗೌಡ

ನರೇಂದ್ರ ಮೋದಿ ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ: ಹೆಚ್‌ ಡಿ ದೇವೇಗೌಡ

ಭಾರತದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಮತ್ತೆ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು ಎಂಬ ಯಾವುದೇ ಆಸೆ ಇಲ್ಲ ಎಂದು ಹೆಚ್‌ ಡಿ ದೇವೇಗೌಡರು ಹೇಳಿದರು.

ಚಿಕ್ಕಮಗಳೂರಿನ ಮೂಡಿಗೆರೆ ಆಡ್ಯಂತಾಯ ರಂಗ ಮಂದಿರದಲ್ಲಿ ನಡೆದ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶದಲ್ಲಿ ನಾತನಾಡಿದ ಅವರು, “ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಾಮಾಣಿಕ ನಾಯಕನನ್ನು ಆರಿಸಿ ಮೋದಿಯವರಿಗೆ ಉಡುಗೊರೆ ನೀಡುವುದು ಸಂತಸ ತಂದಿದೆ. ಪ್ರಧಾನಮಂತ್ರಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ” ಎಂದರು.

“ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ. ಕೋಟ ಶ್ರೀನಿವಾಸ ಪೂಜಾರಿಯವರ ಎದುರು ನಿಂತ ಕಾಂಗ್ರೆಸ್ ಅಭ್ಯರ್ಥಿ ನನ್ನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದವರು. ಆದರೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗೆ ಹೋಲಿಸಿದರೆ ಕೋಟರವರ ವ್ಯಕ್ತಿತ್ವ ಬಹಳ ಎತ್ತರದಲ್ಲಿ ನಿಲ್ಲುತ್ತದೆ” ಎಂದು ಹೇಳಿದರು.

“ಪ್ರಾಮಾಣಿಕ ರಾಜಕಾರಣಿಗಳು ಸಂಸತ್ ಪ್ರವೇಶಿಸಬೇಕು ಆ ಹಿನ್ನೆಲೆಯಲ್ಲಿ ಇಂತಹ ರಾಜಕಾರಣಿಗಳು ಸಂಸತ್ ಪ್ರವೇಶ ಮಾಡಬೇಕಾದಂತಹ ಅಗತ್ಯವಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಅವರ ಆಯ್ಕೆ ನಮಗೆ ನಿಜಕ್ಕೂ ಸಂತಸ ತಂದಿದೆ” ಎಂದರು.

ಸಿ ಟಿ ರವಿ ಮಾತನಾಡಿ, “ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ಮೂಲಕ, ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯಾಗಿಸಿ ‘ವಿಕಸಿತ ಭಾರತ’ದ ಕನಸು ನನಸಾಗಿಸಲು‌ ಸಹಕಾರ ನೀಡಿ” ಎಂದು ಕೋರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments