Homeಕರ್ನಾಟಕಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ನಾನು ಲಾಬಿ ಮಾಡಿಲ್ಲ: ಸಚಿವ ಎಂ ಬಿ ಪಾಟೀಲ್‌

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ನಾನು ಲಾಬಿ ಮಾಡಿಲ್ಲ: ಸಚಿವ ಎಂ ಬಿ ಪಾಟೀಲ್‌

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ನಾನೇನು ಲಾಬಿ ಮಾಡಿಲ್ಲ. ಲಾಬಿ ಮಾಡುವ ಸಂದರ್ಭವೂ ಇಲ್ಲ. ಲೋಕಸಭೆ ಚುನಾವಣೆಯ ನಂತರ ಈ ವಿಚಾರ ಚರ್ಚೆಗೆ ಬರಲಿದೆ. ಪಕ್ಷದಲ್ಲಿ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ಬಯಸಿದರೆ ಎಲ್ಲವೂ ಆಗುತ್ತದೆ. ಸಂಪುಟ ಪುನಾರಚನೆಯೂ ಆಗುತ್ತದೆ. ಇನ್ನು ಸಿಎಂ ಬದಲಾವಣೆ ವಿಚಾರ ನಮ್ಮ ವ್ಯಾಪ್ತಿಯಲ್ಲಿಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಂಡವಾಳ ಹೂಡಿಕೆ ಚೆನ್ನೈಗೆ ಹೋಗಿದೆ, ಬಂಡವಾಳ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಬಿಜೆಪಿ ನಾಯಕರ ಆಪಾದನೆಯಲ್ಲಿ ಹುರುಳಿಲ್ಲ” ಎಂದರು.

“ಬಿಜೆಪಿಯ 4 ವರ್ಷಗಳ ಅವಧಿಯಲ್ಲಿ ಕೃಷಿ, ತೋಟಗಾರಿಕೆ, ಕೈಗಾರಿಕೆ, ವಸತಿ ಸೇರಿದಂತೆ ಯಾವುದೇ ಇಲಾಖೆ ಸಮರ್ಪಕವಾಗಿ ಕೆಲಸ ನಿರ್ವಹಿಸಿಲ್ಲ” ಎಂದರು.

“ನಮ್ಮ 1ವರ್ಷದ ಅವಧಿಯ ಒಂದು ಉದಾಹರಣೆ ಕೊಡುವುದಾದರೆ ಫಾಕ್ಸ್ ಕಾನ್ 25 ಸಾವಿರ ಕೋಟಿರೂಗಳ ಕಾಮಗಾರಿ ಆರಂಭಿಸಿದೆ. ಅಮೆರಿಕಾ, ದಾವೋಸ್ ಭೇಟಿ ಸೇರಿದಂತೆ ನಮ್ಮ 1ವರ್ಷ ಹಾಗೂ ಬಿಜೆಪಿಯವರ 4 ವರ್ಷಗಳಲ್ಲಾದ ಎಲ್ಲಾ ವಿವರಗಳನ್ನು ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ” ಎಂದು ಹೇಳಿದರು.

ಸಚಿವರ ಗಮನಕ್ಕೆ ಬಾರದೆ ಹಣ ವರ್ಗಾವಣೆ

“ಸಚಿವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗುತ್ತೆ. ನನ್ನ ಇಲಾಖೆಯಲ್ಲೂ ಕೆಲವು ವ್ಯತ್ಯಾಸಗಳಾಗಿತ್ತು ಎಂದು ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು.

“ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಯಾವುದೇ ಕೈವಾಡವಿಲ್ಲ ಎಂದರು. ಮುಂದುವರೆದು ಮಾತನಾಡಿ, ಹಲವು ಸಲ ಹಣ ವರ್ಗಾವಣೆ ಆಗುತ್ತದೆ. ನನ್ನ ಇಲಾಖೆಯಲ್ಲೂ ಕೆಲವು ವ್ಯತ್ಯಾಸವಾಗಿದೆ. ಇದನ್ನು ನೋಡಿ ನನಗೂ ಅಚ್ಚರಿಯಾಗಿತ್ತು. ಕೆಲವರನ್ನು ಸಸ್ಪೆಂಡ್ ಮಾಡಿದ್ದೇನೆ. ಹಣ ಬೇರೆ ರಾಜ್ಯಕ್ಕೆ ವರ್ಗಾವಣೆ ಆಗಿರುವ ವಿಚಾರವಾಗಿ ಸಿಎಂ ತನಿಖೆಗೆ ಆದೇಶ ಮಾಡುತ್ತಾರೆ. ಯಾವ ರೀತಿ ತನಿಖೆ ಎಂಬುದನ್ನು ಅವರು ನಿರ್ಧರಿಸುತ್ತಾರೆ” ಎಂದರು.

ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹಿರಿಯರನ್ನು ಕಡೆಗಣಿಸಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, “ಎಲ್ಲವೂ 4 ಗೋಡೆಗಳ ಮಧ್ಯೆ ಚರ್ಚೆಯಾಗುತ್ತದೆ. ಈ ಹಿಂದೆ ನಾಲ್ವರ ಕಮಿಟಿ ಇತ್ತು. ಸಮ್ಮಿಶ್ರ ಸರ್ಕಾರದಲ್ಲೂ ಕಮಿಟಿ ಇತ್ತು. ಇದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇವೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments