Homeಕರ್ನಾಟಕಸಂಸದ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ: ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ

ಸಂಸದ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ: ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಚುನಾವಣೆ ವೇಳೆ ನನಗೆ ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿ, ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ. ನನ್ನ ಸೋಲಿಸಲು ಅವರಿಂದ ಷಡ್ಯಂತ್ರ ನಡೆದಿದೆ. ತಕ್ಷಣ ಅವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಮತಗಳ ಅನ್ಯಾಯವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿ, ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ” ಎಂದು ಆರೋಪಿಸಿದರು.

“ರಾಘವೇಂದ್ರ ಅವರನ್ನು ಬಂಧಿಸಲು ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ ಮೇಲೆ ಎಫ್ಐಆರ್ ದಾಖಲಿಸಬೇಕು” ಎಂದಯ ಒತ್ತಾಯಿಸಿದರು.

“ನನ್ನ ಚುನಾವಣೆಯ ಉದ್ದೇಶ ಯಶಸ್ವಿಯಾಗಿದೆ. ಜಿಲ್ಲೆಯ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ಬೇರೆ ಪಕ್ಷ ಕಟ್ಟಲು ನಾನು ಯಡಿಯೂರಪ್ಪ ಅಲ್ಲ. ಪಕ್ಷ ಶುದ್ದೀಕರಣದ ಸಿದ್ದಾಂತ ಮುಂದುವರಿಸುತ್ತೇನೆ. ಸಿದ್ಧಾಂತ, ಹಿಂದುತ್ವದ ಮುಂದೆ ಯಾರು ದೊಡ್ಡವರಲ್ಲ. ಸಿದ್ದಾಂತಕ್ಕೆ ಪೆಟ್ಟು ಬಿದ್ದಾಗ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿಟಿ ರವಿ, ಪ್ರತಾಪ್ ಸಿಂಹ, ಅನಂತ್ ಕುಮಾರ್ ಅವರ ಧ್ವನಿಯಾಗಿ ನಾನು ನಿಂತಿದ್ದೇನೆ. ಒಂದೇ ತಿಂಗಳಲ್ಲಿ ನಾನು ಸಾಕಷ್ಟು ಪರಿವರ್ತನೆ ತಂದಿದ್ದೇನೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments