Homeಕರ್ನಾಟಕಬಿಜೆಪಿ ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ, ದತ್ತ ಮಾಲೆಯೂ ಹಾಕ್ತಾರೆ: ಚಲುವರಾಯಸ್ವಾಮಿ ವಾಗ್ದಾಳಿ

ಬಿಜೆಪಿ ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ, ದತ್ತ ಮಾಲೆಯೂ ಹಾಕ್ತಾರೆ: ಚಲುವರಾಯಸ್ವಾಮಿ ವಾಗ್ದಾಳಿ

ಎಚ್‌ ಡಿ ಕುಮಾರಸ್ವಾಮಿ ಅವರಿಗೆ ರಾಜ್ಯದ ಜನರ ಸಮಸ್ಯೆ ಮುಖ್ಯ ಅಲ್ಲ. ಅವರು ಯಾವತ್ತೂ ಜನರ ಸಮಸ್ಯೆ ಬಗ್ಗೆ ಮಾತನಾಡಿಲ್ಲ. ಎರಡು ಮೂರು ತಿಂಗಳಿನಿಂದ ನಾಲಿಗೆ ಮೇಲೆ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ನನಗೂ ಅವರಪ್ಪನ ತರ ಮಾತಾಡಲು ಬರುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ ಅವರು, “ಬಿಜೆಪಿ ಅವರು ಹೇಳಿದರೆ ಎಚ್‌ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ. ಅವರಿಗೆ ಸಿದ್ಧಾಂತ ಎಲ್ಲಿದೆ” ಎಂದು ಪ್ರಶ್ನಿಸಿದರು.

“ಕುಮಾರಸ್ವಾಮಿ ನಾವು ಜಾತ್ಯತೀತ ಎಂದು ಮೊದಲು ಹೇಳಿದ್ದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಎಂದು ಜಾತ್ಯತೀತ ಅಂತಾ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುವೆ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ಆ ದೇವರೇ ಬಲ್ಲ” ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತಾ ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್‌ಡ್ರೈವ್ ಇದ್ದರೆ ಬಿಡುಗಡೆ ಮಾಡಿ ಅಂತಾ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ” ಎಂದು ಆಗ್ರಹಿಸಿದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

“ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ.
ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಸರ್ಕಾರದ ಹಣ ಬಿಡುಗಡೆ ಮಾಡುವುದು ತಡವಾದರೆ, ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ” ಎಂದು ಹೇಳಿದರು.

“ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುತ್ತೇವೆ‌. ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತದೆ. ಕೇಂದ್ರ ತಂಡ ಬೆಳೆ ಸಮಿಕ್ಷೆ ನಡೆಸಿ ವರದಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಜನರ ಪರ ಕೆಲಸ ಮಾಡುತ್ತದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments