Homeಕರ್ನಾಟಕಬಡ ಕುಟುಂಬಗಳ ಪಡಿತರ ಚೀಟಿ ವಿನಾಕಾರಣ ರದ್ದಾದರೆ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಡ ಕುಟುಂಬಗಳ ಪಡಿತರ ಚೀಟಿ ವಿನಾಕಾರಣ ರದ್ದಾದರೆ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಎಚ್ವರಿಕೆ ನೀಡಿದ್ದಾರೆ.

ಬಿಪಿಎಲ್‌ ಕಾರ್ಡ್‌ ರದ್ದು ವಿಚಾರ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ. ಪ್ರತಿಪಕ್ಷಗಳು ಕಾರ್ಡ್‌ ರದ್ದು ವಿಷಯವನ್ನು ರಾಜಕೀಯಗೊಳಿಸಿ, ಗ್ಯಾರಂಟಿಗಾಗಿ ಹಣ ಉಳಿಸಲು ಬಡವರ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡುತ್ತಿದೆ ಎಂದು ಆರೋಪಿಸಿ ಆಡಳಿತ ಪಕ್ಷದ ವಿರುದ್ಧ ಟೀಕಾಪ್ರಹಾರ ನಡೆಸಿವೆ.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

“ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ” ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments