Homeಕರ್ನಾಟಕಬಿಜೆಪಿಯವರು ಒಂದೇ ಒಂದು ಅಣೆಕಟ್ಟು ಕಟ್ಟಿದ ಉದಾಹರಣೆ ಇದ್ದರೆ ನಾನು ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುವೆ:...

ಬಿಜೆಪಿಯವರು ಒಂದೇ ಒಂದು ಅಣೆಕಟ್ಟು ಕಟ್ಟಿದ ಉದಾಹರಣೆ ಇದ್ದರೆ ನಾನು ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುವೆ: ಸಿದ್ದರಾಮಯ್ಯ ಸವಾಲು

ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಇಡೀ ಜಿಲ್ಲೆಯ ಜನತೆಗೆ ಸರ್ಕಾರ ಮತ್ತು ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದಲ್ಲಿ ಬಿಜೆಪಿಯವರು ಒಂದೇ ಒಂದು ಅಣೆಕಟ್ಟು ಕಟ್ಟಿದ-ನೀರಾವರಿಗೆ ನೆರವು ಮಾಡಿದ ಉದಾಹರಣೆ ಇದ್ದರೆ ನಾನು ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.

“ಕಾಂಗ್ರೆಸ್ ಈ ದೇಶಕ್ಕೆ ಏನೂ ಮಾಡಿಲ್ಲ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತದೆ. ಇಡೀ ದೇಶದಲ್ಲಿರುವ ಅಣೆಕಟ್ಟುಗಳನ್ನು ಕಟ್ಟಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ನೆಪಕ್ಕಾದರೂ ಒಂದೂ ಅಣೆಕಟ್ಟು ಕಟ್ಟಿಸಲಿಲ್ಲ. ಕಟ್ಟಿಸಿದ ಉದಾಹರಣೆ ಇದ್ದರೆ ಹೇಳಿ? ಎಂದರು.

“1925 ರಲ್ಲೇ ಆರ್‌ಎಸ್‌ಎಸ್‌ ಹುಟ್ಟಿದರೂ ಅಪ್ಪಿ ತಪ್ಪಿಯೂ ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.‌ ಭಾರತೀಯರನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಿದ್ದು , ಇದಕ್ಕಾಗಿ ಹೋರಟ ಮಾಡಿ ಪ್ರಾಣ ತ್ಯಾಗ ಮಾಡಿದ, ಜೈಲು ಸೇರಿದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈಗ ಭಾರತದ ಜೀವಾಳವಾದ ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಆರಂಭಿಸಿದೆ” ಎಂದು ಹೇಳಿದರು.

“ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಬಿಜೆಪಿಯ ಸಂಸದ ಅನಂತಕುಮಾರ್ ಹೆಗಡೆ ನೇರವಾಗಿ ಹೇಳುತ್ತಾರೆ. ಇದನ್ನು ಬಿಜೆಪಿಯ ಯಾರೊಬ್ಬರೂ ವಿರೋಧಿಸಲಿಲ್ಲ. ಇದರಿಂದ ಅವರ ಸಂವಿಧಾನ ವಿರೋಧಿ ನಿಲುವು ಸ್ಪಷ್ಟವಾಗುತ್ತದೆ” ಎಂದರು.

“ಅಚ್ಛೆ ದಿನ್ ಆಯೇಗಾ ಎಂದ ನರೇಂದ್ರ ಮೋದಿಯವರೇ ಎಲ್ಲಿದೆ ನಿಮ್ಮ ಅಚ್ಛೆ ದಿನ್ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಪೆಟ್ರೋಲ್, ಡೀಸೆಲ್ , ಅಡುಗೆ ಗ್ಯಾಸ್ ಬೆಲೆ ಇಳಿಕೆ ಮಾಡಿದಿರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾಷಣ ಮಾಡಿದ ಮೋದಿಯವರೇ ಈ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಲ್ಲಿವೆ 20 ಕೋಟಿ ಉದ್ಯೋಗ ತೋರಿಸಿ” ಎಂದು ಸವಾಲು ಹಾಕಿದರು.

“ರಾಜ್ಯದಲ್ಲಿ ಬರಗಾಲ ಬಂದಿದೆ. ಬಿಜೆಪಿ ಸಂಸದರು ಕೇಂದ್ರದಿಂದ ರಾಜ್ಯಕ್ಕೆ ಒಂದು ರುಪಾಯಿ ಬರ ಪರಿಹಾರವನ್ನೂ ತರಲಿಲ್ಲ. ರೈಲು ಬಿಡುವುದರಲ್ಲಿ ಮಾತ್ರ ಪ್ರತಾಪ ತೋರಿಸುವ ಮಿಸ್ಟರ್ ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಸಿಲಿಲ್ಲ ಏಕೆ” ಎಂದು ಪ್ರಶ್ನಿಸಿದರು.

ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಕ್ಕೆ ಶಾಸಕರಾದ ಪೊನ್ನಣ್ಣ ಮತ್ತು ಮಂಥರ್ ಗೌಡ ಹಾಗೂ ಇಡೀ ಜಿಲ್ಲೆಯ ಜನತೆಗೆ ಸರ್ಕಾರ ಮತ್ತು ಪಕ್ಷದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷರಾದ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments