Homeಕರ್ನಾಟಕಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ದೇಸಾಯಿ ಆಯೋಗಕ್ಕೆ ನೀಡಲಿ: ಸಚಿವ ಪರಮೇಶ್ವರ್

ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ದೇಸಾಯಿ ಆಯೋಗಕ್ಕೆ ನೀಡಲಿ: ಸಚಿವ ಪರಮೇಶ್ವರ್

ರಾಜ್ಯಾಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬಿಜೆಪಿಯವರು ಸೃಷ್ಟಿ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಪಕ್ಷದವರು ಪದೇಪದೆ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ದೇಸಾಯಿ ಆಯೋಗಕ್ಕೆ ನೀಡಲಿ” ಎಂದರು.

“ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ‌ ಪ್ರತಿಕ್ರಿಯಿಸಲು ಹೋಗುವುದಿಲ್ಲ” ಎಂದು ತಿಳಿಸಿದರು.

“ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಪೊನ್ನಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕು ಅಂತ ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments