Homeಕರ್ನಾಟಕಕಾಂಗ್ರೆಸ್‌ನಲ್ಲಿ ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮ ಬಿಡಬೇಕು: ಆರ್‌ ಅಶೋಕ್

ಕಾಂಗ್ರೆಸ್‌ನಲ್ಲಿ ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮ ಬಿಡಬೇಕು: ಆರ್‌ ಅಶೋಕ್

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಅಧಿವೇಶನದಲ್ಲಿ ಆರ್‌ಎಸ್ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿರುವ ಡಿ ಕೆ ಶಿವಕುಮಾರ್‌ ನಡೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ”‌ ಎಂದು ‌ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ?ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ?” ಎಂದಿದ್ದಾರೆ.

“ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿ ಕೆ ಹರಿಪ್ರಸಾದ್‌ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ” ಎಂದು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ” ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments