ರಾಜ್ಯದ ವಿವಿಧ ಇಲಾಖೆಗಳ ನಾಲ್ವರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಂಟೆಂಡ್ ಎಂಜಿನಿಯರ್ ಎಚ್.ಎಂ.ಜನಾರ್ದನ ಅವರ ಆಪ್ತರ ಮನೆಯಲ್ಲಿ ₹1.70 ಕೋಟಿ ನಗದು ಸೇರಿ ಒಟ್ಟು ₹19.71 ಕೋಟಿಯಷ್ಟು ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
ರಾಜ್ಯದ ವಿವಿಧ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ದೂರುಗಳ ಆಧಾರದಲ್ಲಿ ಒಟ್ಟು 29 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿತ್ತು.
ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದಾರೆ ಎಂಬ ಖಚಿತ ಮಾಹಿತಿ ಮತ್ತು ದೂರಿನ ಅನ್ವಯ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಂದು ಮುಂಜಾನೆ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡಗಳು ಬೆಂಗಳೂರು ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ಆರಂಭಿಸಿದವು.
ಸ್ನೇಹಿತನ ಪ್ಲಾಟ್‌ನಲ್ಲಿ ಹಣದ ರಾಶಿ
ಲೋಕಾಯುಕ್ತ ಅಧಿಕಾರಿಗಳು ಜನಾರ್ಧನ್ ಅವರಿಗೆ ಸೇರಿದ ಸ್ಥಳಗಳ ಜೊತೆಗೆ ಅವರ ಆಪ್ತ ಸ್ನೇಹಿತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್ ಮೇಲೆಯೂ ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿ ಬಚ್ಚಿಡಲಾಗಿದ್ದ ಬರೋಬ್ಬರಿ 1 ಕೋಟಿ 70 ಲಕ್ಷ ರೂಪಾಯಿ ನಗದು ಹಣ ಪತ್ತೆಯಾಗಿದೆ. ಈ ಹಣವು ಅಕ್ರಮವಾಗಿ ಗಳಿಸಿರುವುದಾಗಿದ್ದು, ಪತ್ತೆಯಾಗುವ ಭೀತಿಯಿಂದ ಸ್ನೇಹಿತನ ಮನೆಯಲ್ಲಿ ಇರಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಧಿಕಾರಿಗಳು ಪ್ಲಾಟ್‌ನಲ್ಲಿ ಸಿಕ್ಕ ಕಂತೆ ಕಂತೆ ನೋಟುಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ.
ಜಪ್ತಿ ವಿವರ
1- ಪುರುಷೋತ್ತಮ ದಾಸ್ ಹೆಗಡೆ, ಕಾರ್ಯಪಾಲಕ ಅಭಿಯಂತರರು(ಕೆ-ಶಿಪ್), ಲೋಕೋಪಯೋಗಿ ಇಲಾಖೆ, ಕೆ. ಆರ್. ಸರ್ಕಲ್, ಬೆಂಗಳೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 14 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ. ಶೋಧನಾ ಸಮಯದಲ್ಲಿ ಹೊಂದಿರುವುದು ಕಂಡುಬಂದಿರುತ್ತದೆ.ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ನಿವೇಶನ, 2 ವಾಸದ ಮನೆಗಳು. 2 ಶಿಕ್ಷಣ ಸಂಸ್ಥೆಗಳು, 11 ಎಕರೆ 30 ಗುಂಟೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 11,52,31,255/-
ಇವರ ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 44.23,000/- ನಗದು, ರೂ 60,79,630/- ಬೆಲೆ ಬಾಳುವ ಚಿನ್ನಾಭರಣಗಳು, ರೂ 27,00,000/- ನಿಶ್ಚಿತ ಠೇವಣಿ-1.32.02.630/-. ಒಟ್ಟು ಅಸಮತೋಲನ ಆಸ್ತಿ ಮೌಲ್ಯ- ರೂ. 11,29,33,885/-
2 ಹೆಚ. ಎಂ ಜನಾರ್ಧನ, ಅಧೀಕ್ಷಕ ಅಭಿಯಂತರರು, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 06 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ನಿವೇಶನ, 3 ವಾಸದ ಮನೆಗಳು, ಕೃಷಿ ಜಮೀನು 34 ಎಕರೆ. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 3.20.31.000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1.70.00.000/- ನಗದು. ರೂ 7,08,262/- ಬೆಲೆ ಬಾಳುವ ಚಿನ್ನಾಭರಣಗಳು, ರೂ 20,00,000/- ಬೆಲೆ ಬಾಳುವ ವಾಹನಗಳು, ರೂ. 60,00,000/- ಬೆಲೆಬಾಳುವ ಇತರೆ ವಸ್ತುಗಳು-ಎಲ್ಲಾ ಸೇರಿ ಒಟ್ಟು 2.57.08.262/-
(ಇ) ಒಟ್ಟು ಅಸಮತೋಲನ ಆಸ್ತಿ ಮೌಲ್ಯ- ರೂ. 4,42,39.262/-
3- ಅರ್ಜುನ್, ಆರ್. ಹೆಚ್. ಎ.ಇ.ಇ (ಸಿವಿಲ್), ಬೆಸ್ಕಾಂ, ದಾವಣಗೆರೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 05 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 3 ವಾಸದ ಮನೆಗಳು, 2 ಎಕರೆ 20 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 2,17,71,500/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 800/- ನಗದು, ರೂ 2,49,100/-ಬೆಲೆ ಬಾಳುವ ಚಿನ್ನಾಭರಣಗಳು: ರೂ 16,20,000/- ಬೆಲೆ ಬಾಳುವ ವಾಹನಗಳು, ರೂ 13.00,000/- ಬೆಲೆ ಬಾಳುವ ಇತರೆ ವಸ್ತುಗಳು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 31,69.900/-
(ಇ) ಒಟ್ಟು ಅಸಮತೋಲನ ಆಸ್ತಿ ಮೌಲ್ಯ- ರೂ. 2.18.10.500/-
4 – ಸೋಮಲಿಂಗಪ್ಪ ಫಕೀರಪ್ಪ ಸಿದ್ದನಗೌಡರ್, ಸರ್ವೆ ಸೂಪರ್‌ವೈಸರ್, ಎ.ಡಿ.ಎಲ್.ಆರ್. ಕಚೇರಿ, ಧಾರವಾಡ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 04 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 1 ವಾಸದ ಮನೆ, 3 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 2,08,69,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 82.840/- ನಗದು. ರೂ 35.41,000/- ໖ , 14.90.000/- ໖໖ ವಾಹನಗಳು, ರೂ. 50.00.000/- ಬೆಲೆ ಬಾಳುವ ಇತರೆ ವಸ್ತುಗಳು-ಎಲ್ಲಾ ಸೇರಿ ಒಟ್ಟು 56.13.840/-
(ಇ) ಒಟ್ಟು ಅಸಮತೋಲನ ಆಸ್ತಿ ಮೌಲ್ಯ- ರೂ. 1.82,59,270/-


