Homeಕರ್ನಾಟಕಅಕ್ರಮ ಆಸ್ತಿ | ನಾಲ್ವರು ಅಧಿಕಾರಿಗಳ ಮೇಲೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಅಕ್ರಮ ಆಸ್ತಿ | ನಾಲ್ವರು ಅಧಿಕಾರಿಗಳ ಮೇಲೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್. ಬೆಂಗಳೂರಿನ ಅಬಕಾರಿ ಸೂಪರಿಂಟೆಂಡ್ ಮೋಹನ್ ಕೆ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ. ತಿಪ್ಪೇಸ್ವಾಮಿ ಹಾಗೂ ಮಂಡ್ಯ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ದಾಳಿಗೊಳಗಾದ ಅಧಿಕಾರಿಗಳು.

ನಾಲ್ವರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-1, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲಾ ಘಟಕಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಆರೋಪಿ ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮನೆ, ಅವರ ಜತೆ ನಂಟು ಹೊಂದಿರುವ ವ್ಯಕ್ತಿಗಳ ಮನೆಗಳು, ಕಚೇರಿಗಳು ಮತ್ತು ಬೇನಾಮಿಗಳು ಎಂದು ಶಂಕಿಸಲಾಗಿರುವ ವ್ಯಕ್ತಿಗಳಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಪ್ಲಾಟ್​ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಬಳಿ ಇರೋ ಪ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರಿಗೆ ಸಂಬಂಧಿಸಿದಂತೆ ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಆಸ್ತಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಮಂಗಳೂರಿನ ವೆಲೆನ್ಸಿಯಾದಲ್ಲಿರುವ‌ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೂ ರೇಡ್ ನಡೆಸಿದ್ದಾರೆ. ಕೃಷ್ಣವೇಣಿ ಅವರು ಕಳೆದ ಎರಡು ತಿಂಗಳ ಹಿಂದಷ್ಟೆ ಮಂಗಳೂರಿಗೆ ವರ್ಗಾವಣೆಯಾಗಿದ್ದರು. ಮೂರು ವಾಹನಗಳಲ್ಲಿ ಆಗಮಿಸಿ ಲೋಕಾಯುಕ್ತ ಎಸ್​ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments