Homeಕರ್ನಾಟಕಮೂರು ವಿಭಿನ್ನ ಪ್ರಕರಣ, ಕಳ್ಳಸಾಗಣೆ ಆಗುತ್ತಿದ್ದ 9 ಕೆ.ಜಿ ಚಿನ್ನ ವಶ

ಮೂರು ವಿಭಿನ್ನ ಪ್ರಕರಣ, ಕಳ್ಳಸಾಗಣೆ ಆಗುತ್ತಿದ್ದ 9 ಕೆ.ಜಿ ಚಿನ್ನ ವಶ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಕಾರ್ಯಾಚರಣೆ ಕೈಗೊಂಡು ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ ಭಾರತೀಯರನ್ನು ಬಂಧಿಸಲಾಗಿದೆ. ಫೆಬ್ರವರಿ 1 ರಂದು ಶಾರ್ಜಾದಿಂದ ಹೊರಟಿದ್ದ ವಿಮಾನವನ್ನು ಶೋಧಿಸಿದಾಗ 3.75 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಯನ್ನು ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಸನಗಳ ಮೇಲಿನ ಲಗೇಜ್ ಕ್ಯಾಬಿನ್‌ನಲ್ಲಿ ಬ್ಯಾಗ್‌ನಲ್ಲಿ ಚಿನ್ನದ ಗಟ್ಟಿಯನ್ನು ಸಾಗಿಸಲಾಗುತಿತ್ತು.

ಎರಡನೇ ಪ್ರಕರಣದಲ್ಲಿ, ಮಲೇಷ್ಯಾ ಏರ್‌ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದ ಇಬ್ಬರು ಪ್ರಯಾಣಿಕರನ್ನು ತಡೆದ ಡಿಆರ್‌ಐ ಅಧಿಕಾರಿಗಳು ಅವರಿಂದ1.55 ಕೋಟಿ ಮೌಲ್ಯದ 2,854 ಗ್ರಾಂ ತೂಕದ ಪೇಸ್ಟ್ ರೂಪದ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಶೂ ಸಾಕ್ಸ್ ನಲ್ಲಿ ಚಿನ್ನ ಸಾಗಿಸುತ್ತಿದದ್ದು ಕಂಡುಬಂದಿದ್ದು, ಅವರಿಬ್ಬರನ್ನೂ ಬಂಧಿಸಲಾಗಿದೆ.

ಮೂರನೇ ಪ್ರಕರಣದಲ್ಲಿ, ಅದೇ ಮಲೇಷ್ಯಾ ಏರ್‌ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ಡಿಆರ್‌ಐ ಅಧಿಕಾರಿಗಳು ತಡೆದಿದ್ದು, ಒಳ ಉಡುಪಿನಲ್ಲಿ ಸಾಗಿಸಲಾಗುತ್ತಿದ್ದ 1.42 ಕೋಟಿ ಮೌಲ್ಯದ 2,632 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣಗಳಲ್ಲದೆ, 73.7 ಲಕ್ಷ ರೂಪಾಯಿ ಮೌಲ್ಯದ 3,510 ಇ-ಸಿಗರೇಟ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments