Homeಕರ್ನಾಟಕದೇಶದ ಚುನಾವಣೆ ವ್ಯವಸ್ಥೆಯಿಂದ ಜಗತ್ತಿನ ಎದುರು ಭಾರತ ತಲೆ ತಗ್ಗಿಸುವಂತಾಗಿದೆ: ಬಿ ಕೆ ಹರಿಪ್ರಸಾದ್

ದೇಶದ ಚುನಾವಣೆ ವ್ಯವಸ್ಥೆಯಿಂದ ಜಗತ್ತಿನ ಎದುರು ಭಾರತ ತಲೆ ತಗ್ಗಿಸುವಂತಾಗಿದೆ: ಬಿ ಕೆ ಹರಿಪ್ರಸಾದ್

ಹರಿಯಾಣ ರಾಜ್ಯದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳನ್ನು ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆ ಸಮೇತವಾಗಿ ಬಯಲು ಮಾಡಿದ್ದಾರೆ. ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಹರಿಯಾಣ ರಾಜ್ಯದ ಎಐಸಿಸಿ ಉಸ್ತುವಾರಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಜಗತ್ತಿನ ಪ್ರಜಾಪ್ರಭುತ್ವ ದೇಶಗಳಲ್ಲೇ ಪಾರದರ್ಶಕತೆ, ನಿಷ್ಪಕ್ಷಪಾತ, ಮಾದರಿ ಚುನಾವಣಾ ವ್ಯವಸ್ಥೆ ಹೊಂದಿದ್ದ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ. ಹರಿಯಾಣ ರಾಜ್ಯದಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಸಹಯೋಗದೊಂದಿಗೆ ನಡೆದಿರುವ ಚುನಾವಣಾ ಅಕ್ರಮಗಳು ಅತ್ಯಂತ ನೀಚತನದ ಪರಮಾವಧಿ” ಎಂದು ಟೀಕಿಸಿದ್ದಾರೆ.

“ಕರ್ನಾಟಕದ ಮಹಾದೇವಪುರ, ಅಳಂದ ಕ್ಷೇತ್ರಗಳ ಚುನಾವಣಾ ಆಕ್ರಮಗಳನ್ನು ದಾಖಲೆ ಸಮೇತ ಬಯಲು ಮಾಡಿದ್ದ ಲೋಕಸಭೆ ವಿಪಕ್ಷ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹರಿಯಾಣ ರಾಜ್ಯದಲ್ಲಿ ನಡೆದಿರುವ ಅಕ್ರಮಗಳನ್ನು ಬಯಲು ಮಾಡುತ್ತಾ ನೀಡಿರುವ ದಾಖಲೆಗಳನ್ನ ನೋಡಿದರೇ ದೇಶದ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಗೂ ದಿಗ್ಭ್ರಮೆಯಾಗುತ್ತದೆ” ಎಂದಿದ್ದಾರೆ.

“ಚುನಾವಣಾ ಆಯೋಗದ ಅಕ್ರಮಗಳು ತಾಲೂಕು, ಜಿಲ್ಲೆ, ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ, ಬ್ರೆಜಿಲ್ ದೇಶದ ರೂಪದರ್ಶಿ, ಮಾಡೆಲ್ ವರೆಗೂ ಚಾಚಿರುವುದು ನಾಚಿಕೆಗೇಡು. ಚುನಾವಣಾ ಆಯೋಗ ಮಾದರಿ ಚುನಾವಣಾ ನೀತಿ ಸಂಹಿತಿಯನ್ನು ಘೋಷಿಸುವ ಬದಲು “ಬಿಜೆಪಿ ಪಕ್ಷದ ಗೆಲುವಿಗೆ ಚುನಾವಣಾ ಆಯೋಗದ ಸಹಕಾರದ ಸೂತ್ರಗಳನ್ನ” ಘೋಷಿಸಿ ಬಿಡಲಿ” ಎಂದು ಆಗ್ರಹಿಸಿದ್ದಾರೆ.

“ಹರಿಯಾಣ ರಾಜ್ಯದ ಜನರು ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಮೊದಲೇ ಅರಿತಿದ್ದ ಬಿಜೆಪಿ ಪಕ್ಷ, ಚುನಾವಣಾ ಆಯೋಗದ ಸಹಕಾರದೊಂದಿಗೆ ಅಧಿಕಾರಕ್ಕಾಗಿ ಇಡಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಿರುವುದು ಹರಿಯಾಣ ರಾಜ್ಯದ ಪ್ರತಿಯೊಬ್ಬ ಮತದಾರರಿಗೂ ಮಾಡಿದ ದ್ರೋಹ. ಬಿಜೆಪಿ ಪಕ್ಷದ ವಕ್ತಾರರಂತೆ ಮಾತಾಡುವ ಚುನಾವಣಾ ಆಯೋಗದ ಮುಖ್ಯಸ್ಥರಾಗಿರುವ ಜ್ಞಾನೇಶ್ ಕುಮಾರ್ ಪಲಾಯನವಾದಿಯಾಗದೆ ದೇಶದ ಜನರೆದುರು ಸತ್ಯ ಒಪ್ಪಿಕೊಳ್ಳುವ ಧೈರ್ಯವನ್ನಾದರೂ ಮಾಡಲಿ” ಎಂದಿದ್ದಾರೆ.

“25 ಲಕ್ಷ ಮತಕಳ್ಳತನ ನಡೆಸಿ ಅಧಿಕಾರಕ್ಕೆ ಬಂದ ಹರಿಯಾಣದ ಬಿಜೆಪಿ ಸರ್ಕಾರ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಲು ಅರ್ಹತೆ ಇಲ್ಲ. ಕೂಡಲೇ ರಾಷ್ಟ್ರಪತಿಗಳು ಹರಿಯಾಣ ರಾಜ್ಯ ಸರ್ಕಾರವನ್ನು ವಿಸರ್ಜಿಸಿ, ಸಂವಿಧಾನದ ಮೇಲಿನ ಈ ವ್ಯವಸ್ಥಿತ ದಾಳಿಯ ರಕ್ಷಣೆಗೆ ಧಾವಿಸಬೇಕು. ದೇಶದ ಪ್ರಜಾಪ್ರಭುತ್ವದ ಉಳಿವಿಗಾಗಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಈ ಮತಕಳ್ಳತನದ ವಿರುದ್ಧದ ಹೋರಾಟಕ್ಕೆ ಪ್ರಜಾಪ್ರಭುತ್ವವಾದಿಗಳು ಹೆಗಲು ನೀಡುವಂತಾಗಲಿ” ಎಂದು ಆಶಯ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments