Homeದೇಶಕೈಗಾರಿಕೋದ್ಯಮಿ ರತನ್ ಟಾಟಾ ನಿಧನ

ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ

ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) ನಿಧನರಾಗಿದ್ದಾರೆ.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ
ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು.

ಡಿಸೆಂಬ‌ರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತ್ತು. ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶರಾದ ಸುದ್ದಿ ಕೇಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments