Homeಕರ್ನಾಟಕಪ್ರಯಾಣಿಕರ ಸುರಕ್ಷತೆ | ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಸರ್ಕಾರ ಆದೇಶ

ಪ್ರಯಾಣಿಕರ ಸುರಕ್ಷತೆ | ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಸರ್ಕಾರ ಆದೇಶ

ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಟ್ಯಾಕ್ಸಿ, ಕ್ಯಾಬ್‌ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್‌ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿಸೆಂಬರ್‌ 1ರಿಂದ ಈ ಆದೇಶ ಜಾರಿಗೆ ಬರಲಿದೆ. ಆದರೆ, 2024ರ ನವೆಂಬರ್‌ 30ರವರೆಗೆ ಅಳವಡಿಕೆಗೆ ಅಂದರೆ ಒಂದು ವರ್ಷ ಅವಧಿಯ ಅವಕಾಶ ನೀಡಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಸಲು 7,599 ರೂ. ನಿಗದಿ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಈ ಯೋಜನೆ ಪ್ರಾರಂಭವಾಗಲಿದೆ. ಒಂದು ವರ್ಷದೊಳಗೆ(30/11/24 ) ಪರ್ಮಿಟ್ ವಾಹನಗಳು ಈ ಸಾಧನಗಳನ್ನ ಅಳವಡಿಸಿರಬೇಕು. ಇಲ್ಲವಾದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಡಿವೈಸ್ ಅಳವಡಿಕೆ ಮಾಡದಿದ್ದರೆ ಎಫ್ ಸಿ ನವೀಕರಣವಾಗಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಮತ್ತ ಕೇಂದ್ರ ಸರ್ಕಾರದ 60:40 ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಲ್ಲಿ ಈ ಡಿವೈಸ್ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. ವಾಹನ ಮಾಲೀಕರು ಅರ್ಹ ಕಂಪನಿಗಳಿಂದ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ತಿಳಿಸಲಾಗಿದೆ.

ಯಾವ ವಾಹನಗಳಿಗೆ ಇದು ಕಡ್ಡಾಯ?

ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಹಳದಿ ನಂಬರ್‌ ಪ್ಲೇಟ್‌ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ.

ಪ್ಯಾನಿಕ್ ಬಟನ್ ಕೆಲಸ ಹೇಗೆ?

ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್‌ ಟ್ರ್ಯಾಕಿಂಗ್‌ ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಎಚ್ಚರಿಕೆ ಕೂಡ ಕೊಡಲಿದೆ.

ಪ್ಯಾನಿಕ್ ಬಟನ್ ಇರುವ ವಾಹನಗಳಲ್ಲಿ ಪ್ರಯಾಣಿಸುವಾಗ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್‌ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments