ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಜಯಪುರದಲ್ಲಿ ನಡೆದ ಅಖಿಲ ಬಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
“ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ”
ಎಂದರು.
“ಸರ್ಕಾರ ಒಂದು ವರ್ಷಕ್ಕೆ 1200 ಕೋಟಿ ರೂ.ಗಳನ್ನು ಹಾಲು ನೀಡು ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರಗೆ ಸಂಪೂರ್ಣ ಮನ್ನಾ ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು” ಎಂದು ಹೇಳಿದರು.
“ರೈತರಿಗೆ ಸಾಲ ನೀಡಲು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ
ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ. ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುವುದಾಗಿ” ಭರವಸೆ ನೀಡಿದರು.
“ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ 3 ಲಕ್ಷದವರೆಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಈಗ ಅದನ್ನು ಬಡ್ಡಿ ರಹಿತವಾಗಿ 3-5 ಲಕ್ಷದವರೆಗೆ ಸಾಲ ನೀಡುವ ಕೆಲಸ ಮಾಡಲಾಗಿದೆ. ಶೇ 3 ರಷ್ಟು ಬಡ್ಡಿಯನ್ನು 15 ಲಕ್ಷ ಆಗುವವರೆಗೆ ಮಾತ್ರ ನೀಡಬೇಕು” ಎಂದರು.
“12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದ ಡಿಸಿ, ಸಿಇಒ ಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ” ಎಂದು ಭರವಸೆ ನೀಡಿದರು.
ಸಹಕಾರಿ ರಂಗ ಜಾತಿ ಧರ್ಮರಹಿತ ಕ್ಷೇತ್ರ
“ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು, ಇಂದು ರಾಜ್ಯದಲ್ಲಿ 45600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ” ಎಂದರು.