ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ (ಫೆ.17) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.
ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇ.ಡಿ ಅವರಿಗೆ ಸಮನ್ಸ್ ನೀಡಿತ್ತು. ಆದರೆ, ಒಂದಕ್ಕೂ ಅವರು ಉತ್ತರ ನೀಡಿರಲಿಲ್ಲ. ಈ ಕಾರಣಕ್ಕೆ ಕೋರ್ಟ್ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು.
ಕೋರ್ಟ್ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಮಾತನಾಡಿದ ಕೇಜ್ರಿವಾಲ್, “ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು. ಹೀಗಾಗಿ ಕೋರ್ಟ್ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದೇನೆ” ಎಂದು ತಿಳಿಸಿದರು.
ಮುಂದಿನ ಕೋರ್ಟ್ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುವಂತೆ ಕೋರ್ಟ್ ಸೂಚಿಸಿದೆ ಎಂದು ಆಂಗ್ಲಮಾಧ್ಯಮಗಳಲ್ಲಿ ವರದಿಯಾಗಿದೆ.