Homeಕರ್ನಾಟಕಚನ್ನಪಟ್ಟಣಕ್ಕೆ ಸ್ಪರ್ಧಾಕಾಂಕ್ಷಿ ಎಂದು ಯೋಗೇಶ್ವರ್ ಹೇಳಿದ್ದು ತಪ್ಪಿಲ್ಲ: ವಿಜಯೇಂದ್ರ

ಚನ್ನಪಟ್ಟಣಕ್ಕೆ ಸ್ಪರ್ಧಾಕಾಂಕ್ಷಿ ಎಂದು ಯೋಗೇಶ್ವರ್ ಹೇಳಿದ್ದು ತಪ್ಪಿಲ್ಲ: ವಿಜಯೇಂದ್ರ

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಚನ್ನಪಟ್ಟಣದಲ್ಲಿ ತಾವೂ ಸ್ಪರ್ಧಾಕಾಂಕ್ಷಿ ಎಂದು ಯೋಗೇಶ್ವರ್ ಅವರು ಹೇಳಿದ್ದು, ಅದು ತಪ್ಪೆನ್ನುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಅವರಿಗೆ ಅವರದೇ ಆದ ಹಿಡಿತ, ಬೆಂಬಲ ಇದೆ. ಆದರೆ, ಬಿಜೆಪಿ- ಜೆಡಿಎಸ್ ಪಕ್ಷಗಳು ಒಟ್ಟಾಗಿ ಹೋಗುವ ಸಂದರ್ಭ ಇದು. ಅಲ್ಲಿ ಕುಮಾರಸ್ವಾಮಿ ಅವರು ಆಯ್ಕೆ ಆಗಿದ್ದರು. ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ವಿವರಿಸಿದರು.

“ಬಿಜೆಪಿ- ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದೇವೆ. ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಸಮಿತಿ ರಚಿಸಿ ಅಭಿಪ್ರಾಯ ಪಡೆದಿದ್ದೇವೆ. ಅಶ್ವತ್ಥನಾರಾಯಣ ಅವರ ಸಮಿತಿಯ ವರದಿ ಬಗ್ಗೆ ಮಾಹಿತಿ ಇಲ್ಲ. ನಾನು ಕೂಡ ಅಶ್ವತ್ಥನಾರಾಯಣ ಜೊತೆ ಚರ್ಚೆ ಮಾಡುವೆ. ವರಿಷ್ಠರ ಗಮನಕ್ಕೆ ತರುವೆ” ಎಂದರು.

ಹೈಕಮಾಂಡ್‌ ಅನುಮತಿ ಪಡೆಯಲಿ

ಯತ್ನಾಳ್‌ ಬಣದ ಪಾದಯಾತ್ರೆ ವಿಚಾರವಾಗಿ ಮಾತನಾಡಿ, “ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು ಸತತವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ಶಕ್ತಿ ಸಿಗುವುದಾದರೆ ಕೆಲವರು ಮಾಡಬಯಸಿದ ಪಾದಯಾತ್ರೆಗೆ ವರಿಷ್ಠರು ಸಮ್ಮತಿ ಕೊಡುತ್ತಾರೆ. ನಮ್ಮದು ಈ ವಿಚಾರಕ್ಕೆ ಯಾವುದೇ ರೀತಿಯ ತಕರಾರಿಲ್ಲ” ಎಂದು ಹೇಳಿದರು.

“ಜಲ ಸಂಪನ್ಮೂಲ ಸಚಿವರು ಸಂಪನ್ಮೂಲದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡ ಹಾಗಿದೆ. ಜಲ, ಜನ, ರೈತರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಪ್ರಾಣ ಕಳಕೊಂಡ ಎಸ್‌ಐ ಪರಶುರಾಮ್ ಅವರ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ. ರಾಜ್ಯ ಸರಕಾರದ ಆದ್ಯತೆ ಏನೆಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments