Homeಕರ್ನಾಟಕಫೆ.23 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಫೆ.23 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಅನ್ನು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ‌ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು ಜಿಲ್ಲಾಡಳಿತ, ಜಿ.ಪಂ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಜಿಲ್ಲಾ ಕೌಶಲ್ಯ ಮಿಷನ್,ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಮಹಾನಗರ ಪಾಲಿಕೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಐಟಿ ವಲಯ, ಫೈನಾನ್ಸ್, ಬ್ಯಾಂಕಿಂಗ್, ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಬಿ.ಪಿ.ಒ, ವಾಯ್ಸ್, ರೀಟೈಲ್, ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.

ಉದ್ಯೋಗ ಹುಡುಕುತ್ತಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments