Homeಕರ್ನಾಟಕಯುವ ಪಶುವೈದ್ಯ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ ಖಂಡ್ರೆ ಭರವಸೆ

ಯುವ ಪಶುವೈದ್ಯ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ ಖಂಡ್ರೆ ಭರವಸೆ

ಸ್ಮಾರಕ ನಿರ್ಮಾಣ ಬೇಡಿಕೆ ಪರಿಶೀಲನೆ: ಈಶ್ವರ ಖಂಡ್ರೆ
• ವನ್ಯಜೀವಿ ಚಿಕಿತ್ಸೆಗೆ ಪ್ರಮಾಣಿತ ಮಾನದಂಡ ರೂಪಿಸಲು ಸೂಚನೆ

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಕುಟುಂಬದವರಿಗೆ ಆಶ್ವಾಸನೆ ನೀಡಿದ್ದಾರೆ.

ಆನೆಕಲ್ ಬಳಿಯ ಸಕಲವಾರದಲ್ಲಿರುವ ಡಾ. ಸಮೀಕ್ಷಾ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಇದೊಂದು ಅತ್ಯಂತ ನೋವಿನ ಸಂಗತಿ. ಸರ್ಕಾರ ಈ ನೋವಿನ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದರು.

ವನ್ಯಜೀವಿ ಚಿಕಿತ್ಸೆ ವೇಳೆ ಹುತಾತ್ಮರಾದ ಯುವವೈದ್ಯೆಯ ಹೆಸರಲ್ಲಿ ಸ್ಮಾರಕ ನಿರ್ಮಿಸಬೇಕು ಎಂಬ ಅವರ ತಂದೆ ಧ್ರುವಕುಮಾರ್ ಮತ್ತು ತಾಯಿ ಶೈಲಜಾ ರೆಡ್ಡಿ ಅವರ ಬೇಡಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಮೃಗಾಲಯದಲ್ಲಿ ವನ್ಯಜೀವಿಗಳಿಗೆ ಪಶುವೈದ್ಯರು ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಲ್ಲಿ ಯಾವುದೇ ಲಿಖಿತ ಪ್ರಮಾಣಿತ ಮಾನದಂಡ ಇಲ್ಲ. ಈ ನಿಟ್ಟಿನಲ್ಲಿ ಮಹಿಳಾ ಪಶುವೈದ್ಯರಿಗೆ ಹಾಗೂ ವೈದ್ಯರಿಗೆ ಸುರಕ್ಷತೆ ಕಲ್ಪಿಸುವುದೂ ಸೇರಿದಂತೆ ಕೂಡಲೇ ಸೂಕ್ತ ಎಸ್.ಓ.ಪಿ. ರೂಪಿಸುವಂತೆ ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ತಾವು ಸೂಚನೆ ನೀಡಿರುವುದಾಗಿ ಈಶ್ವರ ಖಂಡ್ರೆ ಹೇಳಿದರು.

ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇತ್ತು. ಅವರು ಚಿರತೆಯೊಂದಕ್ಕೆ ಚಿಕಿತ್ಸೆ ನೀಡಿ ಗುಣಪಡಿಸಿದ್ದ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇವರ ಸಾವಿನಿಂದ ರಾಜ್ಯ ಒಬ್ಬ ಯುವ ಪಶುವೈದ್ಯಯನ್ನು ಕಳೆದುಕೊಂಡಿದೆ ಎಂದರು.

ತಮಗೆ ಈ ಘಟನೆಯ ಬಗ್ಗೆ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳ ಸಭೆ ಕರೆದು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದೇನೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಮಗೆ ಪರಿಹಾರ ನೀಡುವುದು ಬೇಡ, ಪರಿಹಾರದ ಹಣದಲ್ಲಿ ಡಾ. ಸಮೀಕ್ಷಾ ರೆಡ್ಡಿ ಅವರ ಹೆಸರಲ್ಲಿ ಸ್ಮಾರಕ ಮಾಡಲು ಕೋರಿದ್ದಾರೆ. ಆನೆಗೆ ಅವರ ಹೆಸರಿಡಬೇಕು ಎಂಬ ಸಲಹೆ ಬಂದಿದೆ. ಎಲ್ಲ ವಿಚಾರಗಳ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments