Homeಕರ್ನಾಟಕಕಡಬ | ಪರೀಕ್ಷಾ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ | ಪರೀಕ್ಷಾ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಮುಸುಕುದಾರಿ ಯುವಕನೊಬ್ಬ ಆ್ಯಸಿಡ್ ಎರಚಿದ್ದು, ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ. ಆ್ಯಸಿಡ್ ಎರಚಿದ ಯುವಕನನ್ನು ವಿದ್ಯಾರ್ಥಿಗಳು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಅಬಿನ್ ಎಂದು ತಿಳಿದುಬಂದಿದೆ.

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆರೋಪಿ ಅಬಿನ್​ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ಗೊತ್ತಾಗಿದೆ.

ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆ. ಹಾಗೂ ಆರೋಪಿ ಅಬಿನ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಲು ಕಾರಣವೇನು? ಆ್ಯಸಿಡ್ ಹೇಗೆ ಸಿಕ್ಕಿದೆ? ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments