Homeಕರ್ನಾಟಕಕರ್ನಾಟಕ ಫಲಿತಾಂಶ: ಎಸ್ಸಿ, ಎಸ್ಟಿ ಕ್ಷೇತ್ರಗಳಲ್ಲಿ ವಿಜಯಮಾಲೆ ಯಾರ ಕೊರಳಿಗೆ?

ಕರ್ನಾಟಕ ಫಲಿತಾಂಶ: ಎಸ್ಸಿ, ಎಸ್ಟಿ ಕ್ಷೇತ್ರಗಳಲ್ಲಿ ವಿಜಯಮಾಲೆ ಯಾರ ಕೊರಳಿಗೆ?

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ ಬಹುತೇಕ ಕ್ಲೀಯರ್‌ ಆಗಿದ್ದು, ಕಾಂಗ್ರೆಸ್‌ 9, ಬಿಜೆಪಿ 17 ಹಾಗೂ ಜೆಡಿಎಸ್‌ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ ಐದು ಎಸ್ಸಿ ಮೀಸಲು ಕ್ಷೇತ್ರಗಳು ಮತ್ತು ಎರಡು ಎಸ್ಟಿ ಮೀಸಲು ಕ್ಷೇತ್ರಗಳಿದ್ದು, ಫಲಿತಾಂಶ ಏನಿದೆ? ಮತದಾರರು ಯಾರ ಕೊರಳಿಗೆ ವಿಜಯಮಾಲೆ ಹಾಕಿದ್ದಾರೆ ನೋಡೋಣ.

ಐದು ಎಸ್‌ಸಿ ಮೀಸಲು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌, ಎರಡು ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದೆ. ಹಾಗೆಯೇ ಎರಡೂ ಎಸ್ಟಿ ಕ್ಷೇತ್ರಗಳೂ ಕಾಂಗ್ರೆಸ್‌ ಪಾಲಾಗಿವೆ.

ಎಸ್‌ಸಿ ಮೀಸಲು ಕ್ಷೇತ್ರಗಳು

ವಿಜಯಪುರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಾಜು ಅಲಗೂರು ಸೋಲು ಅನುಭವಿಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠಿತ ಕ್ಷೇತ್ರವಾಗಿದ್ದ ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ. ಪ್ರತಿ ಸ್ಪರ್ಧಿ ಉಮೇಶ್‌ ಜಾದವ್‌ ಅವರು ಸೋಲು ಕಂಡಿದ್ದಾರೆ. ಕಳೆದ ಬಾರಿ ಇವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಹೊರಗಿನ ಬಾಗಲಕೋಟೆ ಜಿಲ್ಲೆಯವರಾದರೂ ಇಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಬಿ ಎನ್‌ ಚಂದ್ರಪ್ಪ ಸೋಲು ಅನುಭವಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಚಿವ ಹೆಚ್‌ ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಅವರು ಗೆಲುವು ಸಾಧಿಸಿದ್ದು, ಮೊದಲ ಬಾರಿಗೆ ಅವರು ಸಂಸತ್‌ ಪ್ರವೇಶಿಸುತ್ತಿದ್ದಾರೆ. ಬಿಜೆಪಿಯ ಎಸ್‌ ಬಾಲರಾಜ್‌ ಸೋಲು ಕಂಡಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ರಕ್ಷಾ ರಾಮಯ್ಯ ಸೋಲು ಅನುಭವಿಸಿದ್ದಾರೆ.

ಎಸ್ಟಿ ಕ್ಷೇತ್ರಗಳು

ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಿ ಕುಮಾರ್‌ ನಾಯಕ್‌ ಅವರು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ರಾಜಾ ಅಮರೇಶ್ವರ್‌ ನಾಯಕ್‌ ಸೋಲು ಕಂಡಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ಸೋಲು ಅನುಭವಿಸಿದ್ದಾರೆ. ವಿಧಾನಸಭೆಯಲ್ಲೂ ಇವರು ಸೋಲು ಕಂಡಿದ್ದರು. ಕಾಂಗ್ರೆಸ್‌ನ ಇ ತುಕಾರಾಮ್‌ ಶ್ರೀರಾಮುಲು ಅವರನ್ನು ಸೋಲಿಸಿ ಸಂಸತ್‌ ಪ್ರವೇಶಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments