2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶ ಕಲ್ಪಿಸಿ ಸರ್ಕಾರ ಆದೇಶಿಸಿದೆ.
2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನಲ್ಲಿ ಕೆಎಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಇಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ.
ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದರು. ಈ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡಲಾಗಿದೆ.