Homeಕರ್ನಾಟಕಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಕೆ ಜೆ ಜಾರ್ಜ್ ಅಧ್ಯಕ್ಷರಾಗಿ ನೇಮಕ

ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಕೆ ಜೆ ಜಾರ್ಜ್ ಅಧ್ಯಕ್ಷರಾಗಿ ನೇಮಕ

ರಾಜ್ಯದ ಕ್ರಿಶ್ಚಿಯನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸಮುದಾಯ ಭವನಗಳ ನಿರ್ಮಾಣ, ಚರ್ಚ್ ದುರಸ್ತಿ ಹಾಗೂ ನವೀಕರಣ ಮುಂತಾದ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೂಲಕ ಅನುಷ್ಠಾನಗೊಳಿಸಲು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ನೂತನ ಅಧ್ಯಕ್ಷ ಮತ್ತು ಸದಸ್ಯರ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರನ್ನು ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಸಮಿತಿಯಲ್ಲಿ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್‌ ಸಿಮಯೋನ್‌, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ ಆರ್‌ ಲೋಬೋ, ವಿಧಾನಸಭಾ ಮಾಜಿ ನಾಮ ನಿರ್ದೇಶಿತ ಸದಸ್ಯೆ ವಿನಿಶಾ ನಿರೋ ಹಾಗೂ ವಿಧಾನ ಪರಿಷತ್ತಿನ ಸರ್ಕಾರಿ ಮಾಜಿ ಮುಖ್ಯ ಸಚೇತಕ ಐವನ್‌ ಡಿ ಸೋಜಾ ಅವರನ್ನು ನೂತನ ಸದಸ್ಯರನ್ನಾಗಿ ನೇಮಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments