ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೂಲಕ ಸುಮಾರು ಏಳು ತಿಂಗಳ ಬಳಿಕ ವಿಧಾನ ಪರಿಷತ್‌ಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆದಂತೆ ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.
ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.
ಸುನಿಲ್ ವಲ್ಯಾಪುರೆ ಅವರನ್ನು ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿಯೂ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನಸಭೆಯ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.
ಎನ್ ರವಿಕುಮಾರ್ ಅವರನ್ನು ವಿಧಾನ ಪರಿಷತ್‌ನ ಮುಖ್ಯ ಸಚೇತರಕರಾಗಿಯೂ ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾಗಿದ್ದಾರೆ.