Homeಕರ್ನಾಟಕಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದ ಕೆ ಪಿ ನಂಜುಂಡಿ, ನಾಳೆ ಕಾಂಗ್ರೆಸ್‌ ಸೇರ್ಪಡೆ

ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದ ಕೆ ಪಿ ನಂಜುಂಡಿ, ನಾಳೆ ಕಾಂಗ್ರೆಸ್‌ ಸೇರ್ಪಡೆ

ವಿಶ್ವಕರ್ಮ ಸಮಾಜದ ಮುಖಂಡ‌ ಹಾಗೂ ಬಿಜೆಪಿ ನಾಯಕ ಕೆ ಪಿ ನಂಜುಂಡಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ ತರಳಿ, ರಾಜೀನಾಮೆ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೆ ಪಿ ನಂಜುಂಡಿ, “ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ, ಸ್ಥಾನ ನೀಡಲಿಲ್ಲ. ಇದರಿಂದ ಬೇಸರವಾಗಿ ಎಂ.ಎಲ್.ಸಿ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದರು.

ಕಾಂಗ್ರೆಸ್ ಸೇರ್ಪಡೆ

“ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಬುಧವಾರ ಕಾಂಗ್ರೆಸ್‌ ಸೇರ್ಪಡೆ ಯಾಗಲಿದ್ದೇನೆ” ಎಂದು ಇದೇ ವೇಳೆ ತಿಳಿಸಿದರು.

ಕೆ ಪಿ ನಂಜುಂಡಿ ರಾಜೀನಾಮೆ ಕುರಿತು ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿ, “ರಾಜಿನಾಮೆ ಅಂಗೀಕರಿಸಿದ್ದೇನೆ. ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ” ಎಂದರು.

“ನನ್ನ ಸಭಾಪತಿ ಅವಧಿಯಲ್ಲಿ 13 ಜನ ರಾಜಿನಾಮೆ ಕೊಟ್ಟಿದ್ದಾರೆ. ರಾಜಕೀಯದಲ್ಲಿ ನೈತಿಕತೆ ಈಗ ಕಡಿಮೆಯಾಗಿದೆ. ದುಡ್ಡುಕೊಟ್ಟು, ತೆಗೆದುಕೊಂಡು ಓಟ್ ಹಾಕುವವರೆಗೆ ಪ್ರಜಾಪ್ರಭುತ್ವಕ್ಕೆ ಬೆಲೆಯಿಲ್ಲ. ಹಿಂದೆ ಸಂಗೀತಗಾರರು, ಸಾಹಿತಿಗಳು ಪರಿಷತ್‌ನಲ್ಲಿ ಇರುತ್ತಿದ್ದರು. ಈಗ ಹಣ, ತೋಳ್ಬಲದ ರಾಜಕೀಯ ನಡೆಯುತ್ತಿದೆ. ಯಾರಿಗೋ ಆಶ್ರಯ ಕಲ್ಪಿಸಲು ಎಮ್‌ಎಲ್‌ಸಿ ಮಾಡುತ್ತಾರೆ. ಸಂವಿಧಾನ ದುರುಪಯೋಗ ಆಗಬಾರದು” ಎಂದದು ಬೇಸರ ಹೊರಹಾಕಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments