Homeಕರ್ನಾಟಕ28 ಲೋಕಸಭಾ ಕ್ಷೇತ್ರಗಳಿಗೆ ಸಂಯೋಜಕರ ಪರಿಷ್ಕೃತ ಪಟ್ಟಿ ಪ್ರಕಟಿಸಿದ ಕೆಪಿಸಿಸಿ

28 ಲೋಕಸಭಾ ಕ್ಷೇತ್ರಗಳಿಗೆ ಸಂಯೋಜಕರ ಪರಿಷ್ಕೃತ ಪಟ್ಟಿ ಪ್ರಕಟಿಸಿದ ಕೆಪಿಸಿಸಿ

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎಐಸಿಸಿ ಅನುಮೋದಿಸಿರುವ ಕರ್ನಾಟಕದ ಲೋಕಸಭಾ ಕ್ಷೇತ್ರವಾರು ಸಂಯೋಜಕರ ಪರಿಷ್ಕೃತ ಪಟ್ಟಿಯನ್ನು ಕೆಪಿಸಿಸಿ ಪ್ರಕಟಿಸಿದೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವಾರು ವೀಕ್ಷಕರ ನೇಮಕಾತಿ ಜೊತೆಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೀಕ್ಷಕರಾಗಿರುವ ಸಚಿವರ ಮೇಲೆ ನಿಗಾ ವಹಿಸಲಿದ್ದು, ಕಾಲಕಾಲಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬೆಂಗಳೂರು ಕೇಂದ್ರಕ್ಕೆ ಜಮೀರ್ ಅಹಮ್ಮದ್ ಖಾನ್, ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕೃಷ್ಣಬೈರೇಗೌಡ, ಬೆಂಗಳೂರು ಗ್ರಾಮಾಂತರಕ್ಕೆ ಡಾ. ಎಂ ಸಿ ಸುಧಾಕರ್‌, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾರೆಡ್ಡಿ ಅವರುಗಳನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.

ಬೆಳಗಾವಿ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಬಳ್ಳಾರಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ನಾಗೇಂದ್ರ, ಬೀದರ್ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ, ವಿಜಯಪುರ ಎಸ್ಸಿ ಮೀಲಸು ಕ್ಷೇತ್ರಕ್ಕೆ ಎಂ ಬಿ ಪಾಟೀಲ್‌, ಚಾಮರಾಜನಗರ ಎಸ್ಸಿ ಮೀಸಲು ಕ್ಷೇತ್ರಕ್ಕೆ ಸಚಿವ ಕೆ.ವೆಂಕಟೇಶ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕೆ ಚ್‌ ಮುನಿಯಪ್ಪ, ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌, ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರಕ್ಕೆ ಡಿ ಸುಧಾಕರ್‌, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ದಿನೇಶ್‌ ಗುಂಡೂರಾವ್‌, ದಾವಣಗೆರೆ ಕ್ಷೇತ್ರಕ್ಕೆ ಎಸ್‌ ಎಸ್‌ ಮಲ್ಲಿಕಾರ್ಜುನ, ಧಾರವಾಡ ಕ್ಷೇತ್ರಕ್ಕೆ ಸಂತೋಷ್‌ ಲಾಡ್‌ ಅವರನ್ನು ನೇಮಿಸಲಾಗಿದೆ.

ಕಲಬುರಗಿ ಎಸ್ಸಿ ಮೀಸಲು ಕ್ಷೇತ್ರಕ್ಕೆ ಪ್ರಿಯಾಂಕ್‌ ಖರ್ಗೆ, ಹಾಸನ ಕ್ಷೇತ್ರಕ್ಕೆ ಕೆ ಎನ್‌ ರಾಜಣ್ಣ, ಹಾವೇರಿ ಕ್ಷೇತ್ರಕ್ಕೆ ಎಚ್‌ ಕೆ ಪಾಟೀಲ, ಕೋಲಾರ ಎಸ್ಸಿ ಮೀಸಲು ಕ್ಷೇತ್ರಕ್ಕೆ ಬೈರತಿ ಸುರೇಶ್‌, ಕೊಪ್ಪಳ ಕ್ಷೇತ್ರಕ್ಕೆ ಶಿವರಾಜ ತಂಗಡಗಿ, ಮಂಡ್ಯ ಕ್ಷೇತ್ರಕ್ಕೆ ಚಲುವರಾಯಸ್ವಾಮಿ ನೇಮಕವಾಗಿದ್ದಾರೆ.

ಮೈಸೂರು ಕ್ಷೇತ್ರಕ್ಕೆ ಎಚ್‌ ಸಿ ಮಹದೇವಪ್ಪ, ರಾಯಚೂರು ಎಸ್ಟಿ ಮೀಸಲು ಕ್ಷೇತ್ರಕ್ಕೆ ಎನ್‌ ಎಸ್‌ ಬೋಸರಾಜು, ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ, ತುಮಕೂರು ಕ್ಷೇತ್ರಕ್ಕೆ ಡಾ. ಜಿ ಪರಮೇಶ್ವರ್‌, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೆ ಜೆ ಜಾರ್ಜ್‌ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಮಂಕಾಳ ವೈದ್ಯ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments