Homeಕರ್ನಾಟಕಶಿವಮೊಗ್ಗದಿಂದ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗದಿಂದ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ ಕೆ ಎಸ್‌ ಈಶ್ವರಪ್ಪ

ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ. ನನ್ನ ಬೆಂಬಲಿಗರು ಬಂಡಾಯ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಪಕ್ಷೇತರ ಸ್ಪರ್ಧೆಯ ಸುಳಿವು ನೀಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೊಡಿಸುವೆ. ಅಲ್ಲಿ ಓಡಾಡಿ ಗೆಲ್ಲಿಸಿಕೊಂಡು ಬರುವೆ ಎಂದು ಯಡಿಯೂರಪ್ಪ ಭರವಸೆ ಕೊಟ್ಟ ಕಾರಣಕ್ಕೆ ಪುತ್ರ ಕಾಂತೇಶನನ್ನು ಅಲ್ಲಿಗೆ ಕಳುಹಿಸಿದ್ದೆ. ಈಗಲೂ ಹಾವೇರಿಯಿಂದ ಪುತ್ರನಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ” ಎಂದರು.

“ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದಲೇ ಸ್ಪರ್ಧಿಸುವೆ” ಎಂದು ಹೇಳಿದರು.

“ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ” ತಿಳಿಸಿದರು.

ಈಶ್ವರಪ್ಪ ಅವರ ಮಾತುಗಳನ್ನು ಗಮನಿಸಿದರೆ ಮಗ ಕಾಂತೇಶನಿಗೆ ಟಿಕೆಟ್‌ಸಿಗಿದ್ದರೆ ಬಿ ಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧವೇ ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆಗೆ ತೆರೆಮರೆಯ ಸಿದ್ಧತೆ ನಡೆಸುತ್ತಿರುವುದು ಸ್ಪಷ್ಟವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments