ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಮೈದಾನದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಎ.ಶಂಕರ್ ಮತ್ತು ಖಜಾಂಚಿ ಇ.ಎಸ್.ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ತಮ್ಮ ಪಾತ್ರ ಸೀಮಿತವಾಗಿದ್ದರೂ ಸಹ ನೈತಿಕ ಜವಾಬ್ದಾರಿ ಹೊತ್ತು ರಾಜಿನಾಮೆ ನೀಡುತ್ತಿರುವುದಾಗಿ ಇಬ್ಬರೂ ಸಹ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಪತ್ರ ರವಾನಿಸಿದ್ದಾರೆ.
ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಯಲ್ಲಿ ನಮ್ಮ ಪಾತ್ರವು ಬಹಳ ಸೀಮಿತವಾಗಿದ್ದರೂ ಸಹ ನೈತಿಕ ಜವಾಬ್ದಾರಿಯಿಂದ ಜೂನ್ 6ರಂದು ರಾತ್ರಿಯಿಂದಲೇ ತಾವು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದು ಎ.ಶಂಕರ್ ಮತ್ತು ಖಜಾಂಚಿ ಇ.ಎಸ್.ಜೈರಾಮ್ ಅವರು ಪತ್ರದಲ್ಲಿ ವಿವರಿಸಿದ್ದಾರೆ.