Homeಕರ್ನಾಟಕಬೆಲೆ ಏರಿಕೆಗೆ ತಯಾರಾಗಿ ಎಂಬುದು ಸರ್ಕಾರದ ಸಂದೇಶ; ಬಸ್ ಪ್ರಯಾಣ ದರ ಏರಿಕೆಗೆ ಎಚ್‌ಡಿಕೆ ಕಿಡಿ

ಬೆಲೆ ಏರಿಕೆಗೆ ತಯಾರಾಗಿ ಎಂಬುದು ಸರ್ಕಾರದ ಸಂದೇಶ; ಬಸ್ ಪ್ರಯಾಣ ದರ ಏರಿಕೆಗೆ ಎಚ್‌ಡಿಕೆ ಕಿಡಿ

ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ” ಎಂದು ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ. ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ” ಎಂದರು.

ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ

“ಕಾಂಗ್ರೆಸ್ ಸರಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿತ್ತು. ಜನರು ಪ್ರತಿಭಟನೆ ಮಾಡಿದರೆ? ಇಲ್ಲ, ಅದಕ್ಕೆ ಅಡ್ಜೆಸ್ಟ್ ಆದರು. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದರು. ಗೈಡ್ ಲೈನ್ಸ್ ವ್ಯಾಲ್ಯೂ, ಮದ್ಯದ ದರವನ್ನು ಏರಿಕೆ ಮಾಡಿದರು. ಹಾಲಿನ ದರವನ್ನು ಏರಿಕೆ ಮಾಡುತ್ತಾರಂತೆ. ಈಗ ನೀರಿನ ದರವೂ ಏರಿಕೆ ಆಗುತ್ತದೆ ಎನ್ನುವ ಮಾಹಿತಿ ಬರುತ್ತಿದೆ. ಎಲ್ಲಾ ದರಗಳನ್ನು ಸರಕಾರ ಏರಿಕೆ ಮಾಡುತ್ತಿದೆ. ಆದರೆ, ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ, ಪ್ರತಿಭಟನೆ ಮಾಡುತ್ತಿಲ್ಲ. ಬೆಲೆ ಏರಿಕೆಗೆ ಜನರ ಸಮ್ಮತಿ ಇದೆ ಎಂದು ಸರಕಾರ ಭಾವಿಸಿದಂತಿದೆ” ಎಂದು ವಾಗ್ದಾಳಿ ನಡೆಸಿದರು.

“ಹೊಸ ವರ್ಷದಲ್ಲಿ ರಾಜ್ಯ ಸರಕಾರ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ ಘೋಷಣೆ ಮಾಡಬೇಕಿತ್ತು. ಆದರೆ, ಬೆಲೆ ಏರಿಕೆ ಘೋಷಣೆ ಮಾಡಿದೆ. ಬೆಲೆ ಏರಿಕೆಗೆ ವರ್ಷಪೂರ್ತಿ ತಯಾರಾಗಿ ಎಂದು ಸರ್ಕಾರ ಜನರಿಗೆ ಸಂದೇಶ ಕೊಡುತ್ತಿದೆ. ಅನಿವಾರ್ಯ ಇದ್ದಾಗ ಮಾತ್ರ ಬೆಲೆ ಏರಿಕೆ ಮಾಡುವುದನ್ನು ನೋಡಿದ್ದೇವೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಅನಿವಾರ್ಯವಿದ್ದಾಗ ಬೆಲೆ ಏರಿಕೆ ಮಾಡುವುದು, ಕಡಿಮೆ ಮಾಡುವುದು ಸಾಮಾನ್ಯ. ಆದರೆ, ಇವರು ಮಾಡಿರುವ ತಪ್ಪಿಗೆ ಜನರ ಮೇಲೆ ಬರೆ ಎಳೆಯುತ್ತಿದ್ದಾರೆ. ಎಲ್ಲ ಸಮಸ್ಯೆಗಳನ್ನೂ ಸರಕಾರವೇ ಮೈ ಮೇಲೆ ಎಳೆದುಕೊಂಡಿದೆ” ಎಂದು ಟೀಕಿಸಿದರು.

ವಿದ್ಯುತ್ ಇಲಾಖೆ ಏನಾಗುತ್ತದೋ?

“ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆ ಏನಾಗುತ್ತದೋ ನೋಡಬೇಕು. ಸರಕಾರದ ಅಸಮರ್ಪಕ ನಿರ್ವಹಣೆಯಿಂದ ಇಲಾಖೆ ಹಾಳಾಗುತ್ತಿದೆ. ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಮಾಡಿದ್ದಾರೆ. ಇದುವರೆಗೆ ಎಷ್ಟು ಯುವ ಜನರಿಗೆ ಹಣ ಹೋಗಿದೆ. ಈ ಸರಕಾರ ಸ್ವೇಚ್ಚಾಚ್ಚರವಾಗಿ ಹಣ ಖರ್ಚು ಮಾಡುತ್ತಿದೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments