Homeಕರ್ನಾಟಕರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದ್ದು, ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದ್ದು, ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್ ವಾಗ್ದಾಳಿ

ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿಸಿ, “ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗೂ ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಈ ವಿಚಾರವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರು ತಮ್ಮ ಕೆಲಸ ಮಾಡಲಿದ್ದಾರೆ” ಎಂದು ತಿಳಿಸಿದರು.

“ಮಾಲೀಕಯ್ಯಾ ಗುತ್ತೇದಾರ್ ಅವರು ಬಹಳ ವರ್ಷಗಳಿಂದ ನಮ್ಮ ಜೊತೆಗಿದ್ದವರು. ಕಾರಣಾಂತರಗಳಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿ ಭವಿಷ್ಯವಿಲ್ಲ ಎಂದು ಅರಿವಾಗಿ ಮತ್ತೆ ಮರಳಿ ಬಂದಿದ್ದಾರೆ” ಎಂದರು.

“ಈ ಹಿಂದೆ ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ. ಮಾಲೀಕಯ್ಯಾ ಅವರು ಪಕ್ಷದ ಅನೇಕ ಹುದ್ದೆಗಳನ್ನು ಅಲಂಕರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಾರೆ. ಈಗ ಯಾವುದೇ ಷರತ್ತುಗಳನ್ನು ವಿಧಿಸದೆ ಮರಳಿ ಬಂದಿದ್ದಾರೆ. ನಮ್ಮ ಶಾಸಕರಾದ ಎಂ.ವೈ ಪಾಟೀಲ್ ಅವರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಇವರ ಸೇರ್ಪಡೆಯನ್ನು ಸ್ವಾಗತಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಮರೆತು ಪಕ್ಷ ಕಟ್ಟಬೇಕು ಎಂಬುದು ಎಲ್ಲರ ಒಕ್ಕೊರಲಾಗಿದೆ” ಎಂದು ಹೇಳಿದರು.

ಬಿಜೆಪಿ ಒಂದಂಕಿ ದಾಟುವುದಿಲ್ಲ

“ಬಿಜೆಪಿ- ದಳದವರ ಮೈತ್ರಿಯನ್ನು ಅವರ ಕಾರ್ಯಕರ್ತರೇ ವಿರೋಧಿಸಿದ್ದಾರೆ. ಉತ್ತರ ಭಾರತದಲ್ಲೂ ಸಾಕಷ್ಟು ಜನ ಬಿಜೆಪಿ ತೊರೆಯುತ್ತಿದ್ದಾರೆ. ಅವರು 400 ಸ್ಥಾನ ಗೆಲ್ಲುತ್ತದೆ ಎನ್ನುವ ವಿಶ್ವಾಸ ಇದ್ದಿದ್ದರೇ ಇತರೇ ಪಕ್ಷಗಳ ನಾಯಕರನ್ನು ಏತಕ್ಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದರು. ನನಗೆ ಬಂದಿರುವ ಮಾಹಿತಿ ಪ್ರಕಾರ ಎನ್ ಡಿಎ ದೇಶದಲ್ಲಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಒಂದಂಕಿ ಸ್ಥಾನಗಳನ್ನು ಪಡೆಯುತ್ತಾರೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments