ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆದ ದೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಏಳು, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನಿಂದ ಒಬ್ಬ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನಿಂದ ಐವಾನ್ ಡಿಸೋಜ, ಕೆ ಗೋವಿಂದರಾಜ್, ಜಗದೇಚ ಗುತ್ತೇದಾರ್, ಬಲ್ಕೀಸ್ ಬಾನು, ಎನ್ ಎಸ್ ಭೋಸರಾಜು, ಎ ವಸಂತ ಕುಮಾರ್, ಡಾ ಯತೀಂದ್ರ ಸಿದ್ದರಾಮಯ್ಯ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.
ಹಾಗೆಯೇ ಬಿಜೆಪಿಯಿಂದ ವಿಧಾನ ಪರಿಷತ್‌ಗೆ ಎನ್ ರವಿಕುಮಾರ್, ಸಿ ಟಿ ರವಿ, ಮೂಳೆ ಮಾರುತಿರಾವ್ ಹಾಗೂ ಜೆಡಿಎಸ್‌ನಿಂದ ಟಿ ಎನ್ ಜವರಾಯಿಗೌಡ ಆಯ್ಕೆಯಾಗಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ದೈವಾರ್ಷಿಕ ಚುನಾವಣೆಗೆ ಒಟ್ಟು 12 ಅಭ್ಯರ್ಥಿಗಳಿಂದ 27 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಪಕ್ಷೇತರ ಅಭ್ಯರ್ಥಿ ಆಸಿಫ್ ಪಾಷಾ ಸಹ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು. ಆಸಿಫ್ ಪಾಷಾ ಅವರಿಗೆ ಸೂಚಕರು ಇಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತವಾಗಿದೆ.