Homeಕರ್ನಾಟಕಪ್ರಚಾರದ ಪ್ರವಾಸ ಬಿಟ್ಟು, ಬಿಜೆಪಿ-ಜೆಡಿಎಸ್ ಕೇಂದ್ರದ ಮೇಲೆ ಒತ್ತಡ ಹಾಕಲಿ: ಡಿ ಕೆ ಶಿವಕುಮಾರ್‌

ಪ್ರಚಾರದ ಪ್ರವಾಸ ಬಿಟ್ಟು, ಬಿಜೆಪಿ-ಜೆಡಿಎಸ್ ಕೇಂದ್ರದ ಮೇಲೆ ಒತ್ತಡ ಹಾಕಲಿ: ಡಿ ಕೆ ಶಿವಕುಮಾರ್‌

ಕೇವಲ ಪ್ರಚಾರಕ್ಕೆ ಪ್ರವಾಸ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರ ಸರ್ಕಾರ ಕಾನೂನು ಪ್ರಕಾರ ಬರಕ್ಕೆ ಬಿಡುಗಡೆ ಮಾಡಬೇಕಾದ ಪರಿಹಾರ ಹಣ ನೀಡಲಿ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೇಂದ್ರದ ಮೇಲೆ ಒತ್ತಡ ತಂದು ತಮ್ಮ ಬದ್ಧತೆ ಪ್ರದರ್ಶಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದರು.

ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಕೇಂದ್ರ ಸರ್ಕಾರ ರಾಜ್ಯದ ಬರದ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ಹಾಗೂ ದಳದವರು ಬಹಳ ಅನುಕಂಪದಿಂದ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದಾರೆ” ಎಂದು ಕುಟುಕಿದರು.

“ರಾಜ್ಯದಿಂದ ಆಯ್ಕೆಯಾದ 25 ಸಂಸದರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಆಗ್ರಹಿಸಲಿ. ಬರ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ 800 ಕೋಟಿ ಹಣ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಕುಡಿಯುವ ನೀರು, ಪಶುಗಳಿಗೆ ಮೇವು ಪೂರೈಕೆಗೆ ಆದ್ಯತೆ ನೀಡಲು ತಿಳಿಸಿದ್ದೇವೆ” ಎಂದರು.

ಬರ ಹಿನ್ನೆಲೆಯಲ್ಲಿ ನರೇಗಾ ಯೋಜನೆಯ ಮೂಲಕ ಸೀಮಿತ ಇರುವ ಉದ್ಯೋಗ ದಿನವನ್ನು 100ರಿಂದ 150 ದಿನಕ್ಕೆ ವಿಸ್ತರಣೆ ಮಾಡಲು ಪ್ರಸ್ತಾಪ ಇಟ್ಟಿದ್ದು ಕೇಂದ್ರ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ.
ರಾಜ್ಯದ ಹಿತಕ್ಕಾಗಿ ಸಂಸದರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಶಾಸಕರು ಕೇಂದ್ರ ಸರ್ಕಾರದ ಬಳಿ ಒತ್ತಡ ಹೇರಲಿ. ಆನಂತರ ಅವರು ರಾಜಕಾರಣ ಮಾಡಲಿ” ಎಂದು ಹೇಳಿದರು.

“ಯಾವುದಕ್ಕೂ ನಾವು ಕೇಂದ್ರದ ಬಳಿ ಭಿಕ್ಷೆ ಬೇಡುತ್ತಿಲ್ಲ. ಕಾನೂನು ಪ್ರಕಾರ ಬರ ಪರಿಸ್ಥಿತಿ ಇದ್ದಾಗ ನರೇಗಾ ಯೋಜನೆಯಡಿ ನೀಡುವ ಉದ್ಯೋಗ ದಿನಗಳನ್ನು 150 ದಿನಗಳಿಗೆ ಹೆಚ್ಚಳ ಮಾಡಬೇಕು. ಈ ಉದ್ಯೋಗ ದಿನ ಹೆಚ್ಚಳ ಮಾಡಲು ಆಗದಿದ್ದರೆ ಕೇಂದ್ರ ಸರ್ಕಾರ ಅದನ್ನು ಸ್ಪಷ್ಟವಾಗಿ ತಿಳಿಸಲಿ. ಆ ಕೆಲಸವನ್ನು ರಾಜ್ಯ ಸರ್ಕಾರವೇ ಮಾಡಲಿದೆ” ಎಂದರು.

ಹೈಕೋರ್ಟ್ ನಿರ್ದೇಶನದಂತೆ ಬೀದಿ ವ್ಯಾಪಾರಿಗಳ ತೆರವು

ಬೆಂಗಳೂರು ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಬಗ್ಗೆ ಕೇಳಿದಾಗ, “ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಕೊಳ್ಳಿ ಎಂದು ಅವರ ಜೊತೆ ಮಾತನಾಡಿ ಹೇಳಿದ್ದೇನೆ. ಎಲ್ಲೆಲ್ಲಿ ರಸ್ತೆಯಲ್ಲಿ ಅಂಗಡಿ ಇಟ್ಟಿದ್ದಾರೆ ಅದನ್ನು ತೆರವು ಮಾಡಿಸಲಾಗಿದೆ. ಆಯುಕ್ತರು ಮತ್ತು ಅಧಿಕಾರಿಗಳು ಈ ಸಂಬಂಧ ಫೋಟೋ, ವಿಡಿಯೋ ತೋರಿಸಿದ್ದಾರೆ. ಈ ವಿಚಾರದಲ್ಲಿ ಹೈಕೋರ್ಟ್ ನಿರ್ದೇಶನವಿದೆ. ಅದರಂತೆ ಪಾಲಿಕೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಬೀದಿ ವ್ಯಾಪಾರಿಗಳ ಹಿತಕಾಯಲು 10 ಸಾವಿರದ ವರೆಗೂ ಸಾಲ ನೀಡಲು ನಾವು ಸಿದ್ಧ ಇದ್ದೇವೆ. ರಸ್ತೆಯಲ್ಲಿ ವ್ಯಾಪಾರ ಮಾಡಿದರೆ ಹೆಚ್ಚು ಅಪಘಾತ ಹಾಗೂ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ವಿಚಾರವಾಗಿ ನಾನು ಮತ್ತೆ ಬೀದಿ ವ್ಯಾಪಾರಿಗಳನ್ನು ಭೇಟಿ ಮಾಡುತ್ತೇನೆ” ಎಂದು ತಿಳಿಸಿದರು.

ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಪ್ರವಾಸ

“ನಾನು ವಿಜಯವಾಡ ಮೂಲಕ ತೆಲಂಗಾಣ ಪ್ರವಾಸ ಮಾಡುತ್ತಿದ್ದು, ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣ ಪ್ರಚಾರ ಮಾಡಲಿದ್ದೇನೆ. ಆಂಧ್ರ ಕಾಂಗ್ರೆಸ್ ಮಾಜಿ ಅಧ್ಯಕ್ಷರು ನನ್ನ ಜೊತೆ ಪ್ರವಾಸ ಮಾಡುತ್ತಿದ್ದಾರೆ. ಪ್ರಚಾರ ಮುಗಿಸಿ ಶ್ರೀಶೈಲಕ್ಕೆ ಹೋಗಲಿದ್ದೇನೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments