Homeಕರ್ನಾಟಕಸಣ್ಣ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಪತ್ರ ಬರೆಯುತ್ತಾರೆ: ಸಿಎಂ ಸಿದ್ದರಾಮಯ್ಯ

ಸಣ್ಣ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಪತ್ರ ಬರೆಯುತ್ತಾರೆ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸೌಧದ ಆಪತ್ಕಾಲ ಯಾನ ಸೇವೆ ಯೋಜನೆಯಡಿವ 65 ಅತ್ಯಾಧುನಿಕ ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿದ ಬಳಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ” ಎಂದರು.

“ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ ಟಿ ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ? ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ” ಎಂದು ತಿಳಿಸಿದರು.

“26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿದ ಜಿಲ್ಲೆಗಳಿಗೆ ಕಳಿಸಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments