Homeಕರ್ನಾಟಕಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌ ಕೆ ಅತೀಕ್ ನೇಮಕ

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌ ಕೆ ಅತೀಕ್ ನೇಮಕ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌ ಕೆ ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ವಂದಿತಾ ಶರ್ಮ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಜನೀಶ್‌ ಗೋಯಲ್‌ ನೇಮಕಗೊಂಡಿದ್ದಾರೆ. ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಅತೀಕ್ ಅವರಿಗೆ ವಹಿಸಿ ಸರ್ಕಾರ ಆದೇಶಿಸಿದೆ.

ನವೆಂಬರ್‌ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ದು, ಅದರ ಆಸುಪಾಸಿನಲ್ಲೇ ಎಲ್‌ ಕೆ ಅತೀಕ್‌ ಅವರು ಕೂಡಾ ಅಧಿಕಾರ ಸ್ವೀಕಾರ ಮಾಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಅವರ ಈ ಹಿಂದಿನ‌ ಸಿಎಂ ಅವಧಿಯಲ್ಲಿ ಅತೀಕ್ ಅವರು ಮುಖ್ಯಮಂತ್ರಿ‌ ಪ್ರಧಾನ‌ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ಬಳಿಕ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ‌ ಕಾರ್ಯದರ್ಶಿಯಾಗಿದ್ದರು.

ಎಲ್ ಕೆ ಅತೀಕ್‌ ಅವರು ರಾಜ್ಯದಲ್ಲಿ ನರೇಗಾ ಯೋಜನೆಯನ್ನು ತಳಮಟ್ಟದಲ್ಲಿ ಯಶಸ್ವಿಯಾಗುವಂತೆ ನೋಡಿಕೊಂಡು ಮನೆ ಮಾತಾಗಿದ್ದರು. ಲುತಾಫುಲ್ಲಾ ಖಾನ್‌ ಅತೀಕ್‌ ಅವರು ಮೂಲತಃ ತುಮಕೂರು ಜಿಲ್ಲೆ ಪಾವಗಡದವರು. ಅವರು ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಯಾಗುವ ಮುನ್ನ ಅವರು ಕರ್ನಾಟಕದಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆಗ ಅವರು ನರೇಗಾ ಯೋಜನೆಯ ಸಫಲಗೊಳಿಸುವ ನಿಟ್ಟಿನಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.

ಅದರಲ್ಲೂ ಕೊರೊನಾ ಕಾಲದಲ್ಲಿ ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಅವರು ಹಲವು ಯೋಜನೆಗಳನ್ನು ರೂಪಿಸಿದ್ದರು. ಎಲ್‌ ಕೆ ಅತೀಕ್‌ ಅವರು 1991ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಆರಂಭದಲ್ಲಿ ಮಂಗಳೂರು ಎಸಿಯಾಗಿ ವೃತ್ತಿ ಬದುಕು ಆರಂಭಿಸಿದ ಅತೀಕ್‌ ಅವರು ಮಂಡ್ಯ, ಹಾಸನದ ಜಿಲ್ಲಾಧಿಕಾರಿಯಾಗಿದ್ದರು.

ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರಾಗಿದ್ದ ಅತೀಕ್‌ ಅವರು, ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದರು. ವಿಶ್ವ ಬ್ಯಾಂಕ್‌ ಕಾರ್ಯ ನಿರ್ವಾಹಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಅನುಭವವೂ ಅವರಿಗಿದೆ. 2025ರ ಜನವರಿಯಲ್ಲಿ ನಿವೃತ್ತರಾಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments