ಜ. 31ರಂದು ನಿವೃತ್ತರಾಗಲಿರುವ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರನ್ನು ಫೆ. 1ರಿಂದ ಅನ್ವಯವಾಗುವಂತೆ ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸದ್ಯ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜವಾಬ್ದಾರಿಯ ಜೊತೆಗೆ ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಅತೀಕ್ ಅವರು ಕರ್ತವ್ಯ ನಿಭಾಯಿಸುತ್ತಿದ್ದಾರೆ. ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರನ್ನು ವಿತ್ತ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.