Homeಕರ್ನಾಟಕಸ್ಮಾರ್ಟ್ ಪಾರ್ಕಿಂಗ್‌ನಲ್ಲಿ ಸ್ಥಳೀಯ ನಿವಾಸಿಗಳಿಗೆ ಶುಲ್ಕ ವಿನಾಯಿತಿ : ಆಯುಕ್ತ ಕೆ. ಎನ್. ರಮೇಶ್

ಸ್ಮಾರ್ಟ್ ಪಾರ್ಕಿಂಗ್‌ನಲ್ಲಿ ಸ್ಥಳೀಯ ನಿವಾಸಿಗಳಿಗೆ ಶುಲ್ಕ ವಿನಾಯಿತಿ : ಆಯುಕ್ತ ಕೆ. ಎನ್. ರಮೇಶ್

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಜಯನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ವಾಹನ ಸವಾರರಿಗೆ ಸುಲಭವಾಗಿ ನಿಲುಗಡೆ ಜಾಗ ಲಭ್ಯವಾಗುವಂತೆ ಮಾಡಲು ಶೀಘ್ರವೇ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀ ಕೆ. ಎನ್. ರಮೇಶ್ ರವರು ತಿಳಿಸಿದರು.

ಪಾರ್ಕಿಂಗ್ ನೀತಿ ಕುರಿತಂತೆ ಟ್ರೇಡರ್ಸ್ ಅಸೋಸಿಯೇಷನ್ ಅಹವಾಲು

ಜಯನಗರ ವ್ಯಾಪ್ತಿಯಲ್ಲಿ ಪಾಲಿಕೆಯ ವತಿಯಿಂದ ಸ್ಮಾರ್ಟ್ ಪಾರ್ಕಿಂಗ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಜಯನಗರ ಟ್ರೇಡರ್ಸ್ ಅಸೋಸಿಯೇಷನ್ ಮುಖಂಡರು ಪಾರ್ಕಿಂಗ್ ಶುಲ್ಕ ತಗ್ಗಿಸಲು, ವಾಹನಗಳಿಗೆ ಮೊದಲ 30 ನಿಮಿಷಗಳ ಕಾಲ ಉಚಿತ ಪಾರ್ಕಿಂಗ್ ಸೇರಿದಂತೆ ಇನ್ನಿತರ ಅಹವಾಲುಗಳನ್ನು ಆಯುಕ್ತರ ಗಮನಕ್ಕೆ ತಂದರು.

ವ್ಯಾಪಾರಿಗಳ ಅಹವಾಲುಗಳ ಅನುಷ್ಠಾನ ಕುರಿತಂತೆ ವಾಸ್ತವವಾಗಿ ಉಂಟಾಗುವ ಸಾಧಕ ಬಾಧಕಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದರು.

ಪ್ರಮುಖ ರಸ್ತೆಗಳಲ್ಲಿ ಮಾತ್ರ ಪಾರ್ಕಿಂಗ್ ಶುಲ್ಕ

ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಕೇವಲ ಮುಖ್ಯ ವಾಣಿಜ್ಯ ರಸ್ತೆಗಳಲ್ಲಿ ಮಾತ್ರ ಜಾರಿಗೆ ತರಲಾಗುತ್ತಿದ್ದು, ಜಯನಗರದಲ್ಲಿನ ನಾಗರೀಕರು ತಮ್ಮ ತಮ್ಮ ವಾಸದ ಮನೆಗಳ ಮುಂದೆ ವಾಹನ ನಿಲ್ಲಿಸಲು ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ವಾಣಿಜ್ಯ ರಸ್ತೆಗಳಲ್ಲಿ ಬೆಳಗ್ಗೆ 9:00 ರಿಂದ ರಾತ್ರಿ 10:00 ಗಂಟೆಯವರೆಗೆ ಮಾತ್ರ ಪಾರ್ಕಿಂಗ್ ಶುಲ್ಕ ಅನ್ವಯವಾಗಲಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ತರಲಾಗಿರುವ ಈ ಯೋಜನೆಗೆ ವ್ಯಾಪಾರಿಗಳು, ಗ್ರಾಹಕರು ಸಹಕರಿಸಬೇಕು ಎಂದು ಆಯುಕ್ತರು ಮನವಿ ಮಾಡಿದರು.

ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ

ಸಂಚಾರ ನಿರ್ವಹಣೆಯನ್ನು ಸುಧಾರಿಸುವ ಉದ್ದೇಶದಿಂದ ಜಯನಗರದ ಆಯ್ದ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ಆ್ಯಪ್ ಮೂಲಕ ರಿಯಲ್-ಟೈಮ್ ಪಾರ್ಕಿಂಗ್ ಲಭ್ಯತೆ ಮಾಹಿತಿ ಹಾಗೂ ವೇರಿಯೇಬಲ್ ಮೆಸೇಜ್ ಸೈನ್ ಬೋರ್ಡ್‌ಗಳಂತಹ ಆಧುನಿಕ ಸೌಲಭ್ಯಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ವಾಹನ ಸವಾರರು ಅಲೆದಾಟವಿಲ್ಲದೆ ನಿಗದಿತ ಜಾಗದಲ್ಲಿ ವಾಹನ ನಿಲ್ಲಿಸಲು ಸಾಧ್ಯವಾಗಲಿದ್ದು, ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಬೀಳಲಿದೆ ಎಂದು ಪಾರ್ಕ್ ಲೆನ್ಸ್ ಸಂಸ್ಥೆಯ ಪ್ರತಿನಿಧಿಗಳು ವಿವರಿಸಿದರು.

ಈ ವೇಳೆ ಮುಖ್ಯ ಅಭಿಯಂತರರಾದ ಶ್ರೀ ಬಸವರಾಜ್ ಕಬಾಡೆ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳು, ಯೋಜನಾ ವಿಭಾಗದ ಇಂಜಿನಿಯರ್‌ಗಳು ಹಾಗೂ ವರ್ತಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments