Homeಕರ್ನಾಟಕ‌ಲೋಕಸಭೆ ಚುನಾವಣೆ | ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ; ಸಚಿವರ ಮಕ್ಕಳಿಗೆ ಮಣೆ

‌ಲೋಕಸಭೆ ಚುನಾವಣೆ | ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ; ಸಚಿವರ ಮಕ್ಕಳಿಗೆ ಮಣೆ

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ರಾತ್ರಿ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇನ್ನೂ ನಾಲ್ಕು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆದು, ಹುರಿಯಾಳುಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರು ಕಸರತ್ತು ನಡೆಸಿದ ಬಳಿಕ ಈ ಪಟ್ಟಿ ಬಿಡುಗಡೆಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಕೆ ಜೆ ಜಾರ್ಜ್‌ ಮತ್ತಿತರರು ಈ ಸಭೆಯಲ್ಲಿ ಭಾಗಿಯಾಗಿ, 21 ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.

ಕಾಂಗ್ರೆಸ್‌ ಈಗಾಗಲೇ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತ ಪಾಟೀಲ, ಚಿಕ್ಕೋಡಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳಕರ ಹಾಗೂ ಬೀದರ್‌ ಲೋಕಸಭೆ ಕ್ಷೇತ್ರಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಮೂಲಕ ನಾಲ್ಕು ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಮಣೆ ಹಾಕಲಾಗಿದೆ.

ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ

ಬೆಂಗಳೂರು ಉತ್ತರ – ರಾಜೀವ್ ಗೌಡ
ಬೆಂಗಳೂರು ದಕ್ಷಿಣ – ಸೌಮ್ಯಾರೆಡ್ಡಿ
ಬೆಂಗಳೂರು ಸೆಂಟ್ರಲ್ – ಮನ್ಸೂರ್ ಆಲಿಖಾನ್
ಮೈಸೂರು – ಎಂ ಲಕ್ಮಣ್
ರಾಯಚೂರು – ‌ಜಿ ಕುಮಾರ ನಾಯಕ್
ಕೊಪ್ಪಳ – ರಾಜಶೇಖರ ಹಿಟ್ನಾಳ್
ಬೀದರ್ – ಸಾಗರ್ ಖಂಡ್ರೆ
ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ದಕ್ಷಿಣ ಕನ್ನಡ – ಆರ್ ಪದ್ಮರಾಜ್
ಚಿತ್ರದುರ್ಗ – ಚಂದ್ರಪ್ಪ
ಕಲಬುರಗಿ – ರಾಧಾಕೃಷ್ಣ
ಧಾರವಾಡ‌ – ವಿನೋದ ಅಸೂಟಿ
ಬಾಗಲಕೋಟೆ – ಸಂಯುಕ್ತ ಪಾಟೀಲ್
ಉಡುಪಿ/ಚಿಕ್ಕಮಗಳೂರು – ಜಯಪ್ರಕಾಶ್ ಹೆಗಡೆ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ – ಪ್ರಿಯಾಂಕ್ ಜಾರಕಿಹೊಳಿ


ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳಿಗೆ ಸದ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಖೈರುಗೊಳಿಸಿಲ್ಲ. ಮೂರನೇ ಪಟ್ಟಿಯಲ್ಲಿ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌ ಆಗಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments